ಕರ್ನಾಟಕ ಋಣ ಪರಿಹಾರ ಕಾಯ್ದೆ : ಸೌಲಭ್ಯಕ್ಕೆ ಅರ್ಜಿ ಆಹ್ವಾನ

ಕರ್ನಾಟಕ ಋಣ ಪರಿಹಾರ ಕಾಯ್ದೆ-2018 ಜುಲೈ 23 ರಂದು ಜಾರಿಗೆ ಬಂದಿರುತ್ತದೆ. ಕುಟುಂಬದ ವಾರ್ಷಿಕ ಆದಾಯ ರೂ 1,20,000/ ಗಳನ್ನು ಮೀರದಿರುವ ಸಣ್ಣ ರೈತರು ಭೂ ರಹಿತ ಕೃಷಿ ಕಾರ್ಮಿಕರು ಮತ್ತು ದುರ್ಬಲ ವರ್ಗದ ಜನರು ಖಾಸಗಿ ಲೇವಾದೇವಿದಾರರು ಹಾಗೂ ಗಿರವಿದಾರರಿಂದ ಸಾಲ ಪಡೆದಿದ್ದಲ್ಲಿ ಈ ಕಾಯ್ದೆ ಸೌಲಭ್ಯ ಪಡೆಯಲು ಅರ್ಹರಿರುತ್ತಾರೆ.

ಕರ್ನಾಟಕ ಋಣ ಪರಿಹಾರ ಕಾಯ್ದೆಯು ಸಾಲಗಾರನೇ ಬಿಟ್ಟುಕೊಟ್ಟ ಕೃಷಿ ಭೂಮಿಯ ಸ್ವತ್ತಿನಿಂದ ಬಾಕಿ ಇರುವ ಬಾಡಿಗೆ, ಭೂ ಕಂದಾಯದ ಹಿಂಬಾಕಿ ವಸೂಲಿ ನ್ಯಾಯಾಲಯದ ಬಿಕರಿ, ಕೇಂದ್ರ ಸರ್ಕಾರ ಅಥವಾ ರಾಜ್ಯ ಸರ್ಕಾರ ಅಥವಾ ಸ್ಥಳಿಯ ಪ್ರಾಧಿಕಾರಕ್ಕೆ ಪಾವತಿಸಬೇಕಾದ ಯಾವುದೇ ಕಂದಾಯ ತೆರಿಗೆ, ಉಪಕಾರ ನಂಬಿಕೆ ದ್ರೋಹದ ಯಾವುದೇ ಹೊಣೆಗಾರಿಕೆಗೆ ಸಲ್ಲಿಸಿದ ಸೇವೆಗಾಗಿ ಸಂಬಳ, ಸರ್ಕಾರಿ ಕಂಪನಿ, ಭಾರತೀಯ ಜೀವ ವಿಮಾ ನಿಗಮ, ಸಹಕಾರ ಸಂಘಗಳು ಸೌಹಾರ್ದ ಸಹಕಾರ ಸಂಘಗಳು, ಬ್ಯಾಂಕೇತರ ಹಣಕಾಸು ಸಂಸ್ಥೆಗಳು, ಬ್ಯಾಂಕ್‍ಗಳು, ಕರ್ನಾಟಕ ಸಂಘಗಳ ನೋಂದಣಿ ಕಾಯ್ದೆ 1960 ಅಧಿನಿಯಮ 17ರ ಅಡಿಯಲ್ಲಿ ನೋಂದಾಯಿತವಾಗಿರುವ ಅತೀ ಸಣ್ಣ ಹಣಕಾಸು ಸಂಸ್ಥೆಗಳು, ಚೀಟ್ ಫಂಡ್ ಕಾಯ್ದೆಯಲ್ಲಿ ನೋಂದಣಿಗೊಂಡಿರುವ ಚೀಟ್ ಕಂಪನಿಗಳು ಕರ್ನಾಟಕ ಋಣ ಪರಿಹಾರ ಕಾಯ್ದೆಗಳು 2018ರ ವ್ಯಾಪ್ತಿಗೆ ಒಳಪಡುವುದಿಲ್ಲ.

ಬೇಕಾಗುವ ದಾಖಲೆಪತ್ರಗಳು
❌ ನಿಗದಿತ ನಮೂನೆ 2ರ ಅರ್ಜಿ
❌ ಆಧಾರ ಕಾರ್ಡ್
❌ ರೇಷನ್ ಕಾರ್ಡ್
❌ ಲೇವಾದೇವಿದಾರರು ನೀಡಿರುವ ರಸೀದಿ
❌ ಆದಾಯ ಪ್ರಮಾಣ ಪತ್ರ
❌ ವಿಳಾಸ ದೃಢೀರಿಸುವ ದಾಖಲೆಗಳ ಪ್ರತಿ.
❌ ತಹಶೀಲ್ದಾರರಿಂದ ಪಡೆದ ಸಣ್ಣ ಹಿಡುವಳಿ ದೃಢೀಕರಣ.

ಸಾಲಗಾರರು ಸದರಿ ಕಾಯ್ದೆಯ ಸೌಲಭ್ಯ ಪಡೆಯಲು ಆಯಾ ತಾಲೂಕು ಕಚೇರಿಗಳಿಂದ ಅರ್ಜಿಯನ್ನು ಪಡೆದು ಜೊತೆಗೆ ಈ ಮೇಲಿನ ಎಲ್ಲಾ ದಾಖಲೆಪತ್ರಗಳನ್ನು ಲಗತ್ತಿಸಿ 2019 ಅಕ್ಟೋಬರ 20 ರೊಳಗಾಗಿ ಸಹಾಯಕ ಆಯುಕ್ತರ ಕಛೇರಿಗೆ ಸಲ್ಲಿಸುವುದು.
ಹೆಚ್ಚಿನ ಮಾಹಿತಿಗಾಗಿ ಸಹಾಯಕ ಆಯುಕ್ತರ ಕಛೇರಿಯನ್ನು ಸಂರ್ಪಕಿಸಬಹುದಾಗಿದೆ.