ಅಕ್ಟೋಬರ್ 14, 1956 ರಂದು ಬಾಬಾಸಾಹೇಬ್ ಅಂಬೇಡ್ಕರರು ಬೌದ್ಧ ಧಮ್ಮ ಸ್ವೀಕಾರ ಕಾರ್ಯಕ್ರಮದಲ್ಲಿ ಮಾಡಿದ 22 ಪ್ರತಿಜ್ಞೆಗಳು:
- ಬ್ರಹ್ಮ, ವಿಷ್ಣು, ಮಹೇಶ್ವರನಲ್ಲಿ ನನಗೆ ನಂಬಿಕೆಯಿಲ್ಲ, ಅವರನ್ನು ನಾನು ಪೂಜಿಸುವುದಿಲ್ಲ.
- ದೇವರ ರೂಪವೆಂದು ಪರಿಗಣಿತವಾದ ರಾಮ ಮತ್ತು ಕೃಷ್ಣನಲ್ಲಿ ನನಗೆ ನಂಬಿಕೆಯಿಲ್ಲ, ಪೂಜಿಸುವುದಿಲ್ಲ.
- ಗೌರಿ, ಗಣಪತಿ ಮತ್ತಿತರ ಹಿಂದೂ ದೇವ – ದೇವತೆಗಳಲ್ಲಿ ನನಗೆ ನಂಬಿಕೆಯಿಲ್ಲ, ನಾನವರನ್ನು ಪೂಜಿಸುವುದಿಲ್ಲ.
- ದೇವರ ಅವತಾರಗಳಲ್ಲಿ ನನಗೆ ನಂಬಿಕೆಯಿಲ್ಲ.
- ಬುದ್ಧ ವಿಷ್ಣುವಿನ ಅವತಾರವೆಂಬುದನ್ನು ನಾನು ನಂಬುವುದಿಲ್ಲ. ಅದು ತಪ್ಪು ಮತ್ತು ಹುಚ್ಚುತನದ ಪ್ರಚಾರ.
- ಶ್ರಾದ್ಧದಂತಹ ಆಚರಣೆಗಳನ್ನು ನಾನು ಮಾಡುವುದಿಲ್ಲ.
- ಬುದ್ಧನ ನೀತಿ ಮತ್ತು ಪಾಠಗಳಿಗೆ ಧಕ್ಕೆ ತರುವಂತಹ ಕೆಲಸಗಳನ್ನು ನಾನು ಮಾಡುವುದಿಲ್ಲ.
- ಸಮಾರಂಭಗಳನ್ನು ಬ್ರಾಹ್ಮಣರು ನೆರವೇರಿಸುವುದಕ್ಕೆ ನಾನು ಬಿಡುವುದಿಲ್ಲ.
- ಮನುಷ್ಯರು ಸಮಾನರು ಎನ್ನುವುದನ್ನು ನಾನು ನಂಬುತ್ತೇನೆ.
- ಸಮಾನತೆಗಾಗಿ ಹೋರಾಡುತ್ತೇನೆ.
- ಬುದ್ಧನ ಎಂಟು ದಮ್ಮಗಳನ್ನು ನಾನು ಪಾಲಿಸುತ್ತೇನೆ.
- ಬುದ್ಧನ ‘ಪರಮಿತ’ವನ್ನು ನಾನು ಪಾಲಿಸುತ್ತೇನೆ.
- ಎಲ್ಲಾ ಜೀವಿಗಳ ಬಗೆಗೂ ಪ್ರೀತಿ ಮತ್ತು ಅನುಕಂಪವನ್ನು ತೋರಿಸುತ್ತೇನೆ, ಅವರ ರಕ್ಷಣೆ ಮಾಡುತ್ತೇನೆ.
- ನಾನು ಕದಿಯುವುದಿಲ್ಲ.
- ನಾನು ಸುಳ್ಳು ಹೇಳುವುದಿಲ್ಲ.
- ನಾನು ಪಾಪವನ್ನು ಮಾಡುವುದಿಲ್ಲ.
- ಮದ್ಯಪಾನವನ್ನಾಗಲೀ, ಮಾದಕವಸ್ತು ತೆಗೆದುಕೊಳ್ಳುವುದನ್ನಾಗಲೀ ನಾನು ಮಾಡುವುದಿಲ್ಲ.
- ಧಮ್ಮವನ್ನು ಪಾಲಿಸುತ್ತಾ ಪ್ರೀತಿಯಿಂದ ಪ್ರತಿ ದಿನವನ್ನು ಕಳೆಯಬಯಸುತ್ತೇನೆ.
- ಹಿಂದೂ ಧರ್ಮ ಮಾನವೀಯತೆಯ ವಿರೋಧಿ. ಅದು ಮಾನವೀಯತೆಯ ಬೆಳವಣಿಗೆಯನ್ನೂ ಸಹಿಸುವುದಿಲ್ಲ. ಕಾರಣ ಹಿಂದೂ ಧರ್ಮ ಅಸಮಾನತೆಯ ಸೌಧದ ಮೇಲೆ ನಿಂತಿದೆ. ಹಾಗಾಗಿ ನಾನು ಹಿಂದೂ ಧರ್ಮವನ್ನು ತ್ಯಜಿಸಿ ಬೌದ್ಧ ಧರ್ಮಕ್ಕೆ ಮತಾಂತರಗೊಂಡಿದ್ದೇನೆ.
- ಬುದ್ಧನ ಧಮ್ಮವೇ ನಿಜವಾದ ಧರ್ಮವೆಂದು ನಾನು ನಂಬುತ್ತೇನೆ.
- ಇದು ನನ್ನ ಪುನರ್ಜನ್ಮವೆಂದೇ ನನ್ನ ನಂಬುಗೆ.
- ನನ್ನಿಡೀ ಜೀವನವನ್ನು ಬುದ್ಧನ ತತ್ವಾದರ್ಶಗಳಿಗೆ ಅನುಗುಣವಾಗಿ ಜೀವಿಸುತ್ತೇನೆಂದು ಈ ಮೂಲಕ ನಾನು ಘೋಷಿಸುತ್ತೇನೆ.












