ರಾಜ್ಯದ 275 ಸ್ಥಳೀಯ ಸಂಸ್ಥೆಗಳ ಹಾಗೂ ಬೃಹತ್ ಬೆಂಗಳೂರು ಮಹಾನಗರಪಾಲಿಕೆಯ 7 ವಲಯ ಪಟ್ಟಣ ವ್ಯಾಪಾರ ಸಮಿತಿ ಸದ್ಯಸರ ಆಯ್ಕೆಗಾಗಿ ಚುನಾವಣೆ
ಬೆಂಗಳೂರು, ಡಿಸೆಂಬರ್ 6 (ಕರ್ನಾಟಕ ವಾರ್ತೆ)

ರಾಜ್ಯದ ನಗರ ಸ್ಥಳೀಯ ಸಂಸ್ಥೆಗಳಲ್ಲಿ ಕರ್ನಾಟಕ ಬೀದಿ ಬೀದಿ ವ್ಯಾಪಾರಿಗಳ (ಜೀವನೋಪಾಯ ಸಂರಕ್ಷಣೆ ಮತ್ತು ಬೀದಿ ಬದಿ ವ್ಯಾಪಾರ ನಿಯಂತ್ರಣ) ನಿಯಮಗಳು 2019 ರನ್ವಯ ಪಟ್ಟಣ ವ್ಯಾಪಾರ ಸಮಿತಿಗೆ ಚುನಾವಣೆ ನಡೆಸಲು ನಿರ್ದೇಶಕರು, ಪೌರಾಡಳಿತ ನಿರ್ದೇಶನಾಲಯ, ಬೆಂಗಳೂರು ಹಾಗೂ ಬೃಹತ್ ಬೆಂಗಳೂರು ಮಹಾನಗರಪಾಲಿಕೆ, ಬೆಂಗಳೂರು ಅವರುಗಳಿಂದ ಸ್ವೀಕೃತವಾಗಿರುವ ವರದಿಯನ್ವಯ ಕರ್ನಾಟಕ ಬೀದಿ ಬದಿ ವ್ಯಾಪಾರಿಗಳ (ಜೀವನೋಪಾಯ ಸಂರಕ್ಷಣೆ ಮತ್ತು ಬೀದಿ ಬದಿ ವ್ಯಾಪಾರ ನಿಯಂತ್ರಣ) ನಿಯಮಗಳು 2019 ರ ನಿಯಮ 5(2) 6(2) ಹಾಗೂ ಅನುಸೂಚಿ (4) ರಲ್ಲಿನ ದತ್ತವಾದ ಅಧಿಕಾರವನ್ನು ಚಲಾಯಿಸಿ ರಾಜ್ಯದ 275 ಸ್ಥಳೀಯ ಸಂಸ್ಥೆಗಳ ಹಾಗೂ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ 7 ವಲಯಗಳ ಪಟ್ಟಣ ವ್ಯಾಪಾರ ಸಮಿತಿಗೆ ಸದಸ್ಯರನ್ನು (ಪ್ರತಿನಿಧಿಗಳ) ಆಯ್ಕೆ ಮಾಡುವ ಸಲುವಾಗಿ ಅವುಗಳ ಮುಂದೆ ತಿಳಿಸಿರುವ ಸ್ಥಳಗಳಲ್ಲಿ ದಿನಾಂಕ: 21-12-2019 ರಂದು (ಸಮಯ ಬೆಳಿಗ್ಗೆ 9.00 ರಿಂದ ಸಂಜೆ 4.00 ಗಂಟೆಯವರೆಗೆ) ಚುನಾವಣೆಯನ್ನು ನಡೆಸಲು ಆದೇಶಿಸಿದೆ.
ನಾಮಪತ್ರಗಳನ್ನು ಸಲ್ಲಿಸಲು ನಿಗಧಿಪಡಿಸಿದ ಅವಧಿ – 09-12-2019 ರಿಂದ 13-12-2019 ರವರೆಗೆ ಸಮಯ ಬೆಳಿಗ್ಗೆ 11.00 ಗಂಟೆಯಿಂದ ಮಧ್ಯಾಹ್ನ 3.00 ಗಂಟೆಯವರೆಗೆ.
ನಾಮಪತ್ರಗಳನ್ನು ಪರಿಶೀಲಿಸುವ ದಿನಾಂಕ: 14-12-2019ರ ಬೆಳಿಗ್ಗೆ 11.00 ಗಂಟೆಯಿಂದ. ಸಿಂಧುವಾದ ನಾಮಪತ್ರಗಳನ್ನು ಪ್ರಟಿಸಬೇಕಾದ ದಿನಾಂಕ: 14-12-2019 ರಂದು ಮಧ್ಯಾಹ್ನ 3-00 ಗಂಟೆಗೆ.
ನಾಮಪತ್ರಗಳನ್ನು ಹಿಂತೆಗೆದುಕೊಳ್ಳಲು ಕೊನೆಯ ದಿನಾಂಕ: 15-12-2019 ಸಂಜೆ 5.00 ಗಂಟೆಗಿಂತ ಮುಂಚೆ. ಅಂತಿಮವಾಗಿ ಕಣದಲ್ಲಿರುವ ಅಭ್ಯರ್ಥಿಗಳ ಪಟ್ಟಿ ಪ್ರಕಟಣೆ 15-12-2019 ರಂದು ಸಂಜೆ 5.30 ಗಂಟೆಗೆ.
ಅಗತ್ಯಬಿದ್ದಲ್ಲಿ ಮತದಾನ ನಡೆಯುವ ದಿನಾಂಕ, ಸ್ಥಳ ಮತ್ತು ಮತದಾನದ ಸಮಯ 21-12-2019 ಸಮಯ ಬೆಳಿಗ್ಗೆ 9.00 ರಿಂದ ಸಂಜೆ 4.00 ಗಂಟೆಯವರೆಗೆ. ಚುನಾವಣಾ ಪ್ರಕ್ರಿಯೆ ಪೂರ್ಣಗೊಳಿಸಿ, ಚುನಾವಣೆ ಫಲಿತಾಂಶ ಪ್ರಕಟಣೆ ದಿನಾಂಕ: 21.12.2019.