*ಡಿ.ಜೆ.ಹಳ್ಳಿಯಲ್ಲಿ ಪ್ರಕ್ಷುಬ್ಧ ವಾತಾವರಣ: ಶಾಂತಿ ಕಾಪಾಡಲು ಪಾಪ್ಯುಲರ್ ಫ್ರಂಟ್ ಮನವಿ*

ಶಾಸಕರ ಸಂಬಂಧಿಯೋರ್ವ ಪ್ರವಾದಿ ನಿಂದನೆಯ ಪೋಸ್ಟ್ ಹಾಕಿದ ಕಾರಣದಿಂದಾಗಿ ಬೆಂಗಳೂರಿನ ಡಿ.ಜೆ.ಹಳ್ಳಿಯಲ್ಲಿ ಪ್ರಕ್ಷುಬ್ಧ ವಾತಾವರಣ ನಿರ್ಮಾಣವಾಗಿದ್ದು, ಜನತೆ ಶಾಂತಿ ಕಾಪಾಡಿ ಸಹಕರಿಸಬೇಕೆಂದು ಪಾಪ್ಯುಲರ್ ಫ್ರಂಟ್ ಆಫ್‌ ಇಂಡಿಯಾದ ರಾಜ್ಯ ಪ್ರಧಾನ ಕಾರ್ಯದರ್ಶಿ ನಾಸಿರ್ ಪಾಶ ಮನವಿ ಮಾಡಿದ್ದಾರೆ.

ಧಾರ್ಮಿಕ ಭಾವನೆಗಳಿಗೆ ಧಕ್ಕೆ ತರುವ ಕೃತ್ಯವು ಸಂವಿಧಾನ ವಿರೋಧಿಯಾಗಿದೆ. ಪರಸ್ಪರರ ಧಾರ್ಮಿಕ ನಂಬಿಕೆಗಳನ್ನು ಗೌರವಿಸುವುದು ಇಲ್ಲಿನ ಪ್ರತಿಯೊಬ್ಬ ನಾಗರಿಕನ ಕರ್ತವ್ಯವಾಗಿದೆ. ಇದೀಗ ಸಾಮಾಜಿಕ ಮಾಧ್ಯಮದಲ್ಲಿ ಪ್ರಚೋದನಾಕಾರಿ ಪೋಸ್ಟ್ ಹಾಕಿರುವುದು ಅಕ್ಷಮ್ಯ ಅಪರಾಧವಾಗಿದೆ‌.

ಇಂತಹ ಕೃತ್ಯಗಳ ಕುರಿತು ಜನರು ಭಾವೋದ್ವೇಗಕ್ಕೆ ಒಳಗಾಗದೆ ಸಂಯಮವನ್ನು ವಹಿಸಬೇಕು, ವದಂತಿಗಳಿಗೆ ಕಿವಿಗೊಡದೆ ಶಾಂತಿ ಕಾಪಾಡಲು ಮುಂದಾಗಬೇಕು. ಕಾನೂನು ಕೈಗೆತ್ತಿಕೊಳ್ಳದೇ ಕಾನೂನಾತ್ಮಕವಾಗಿ ಪ್ರತಿಭಟನೆ ನಡೆಸಬೇಕು. ಹಾಗೆಯೇ ಸಾರ್ವಜನಿಕರ ಆಸ್ತಿಪಾಸ್ತಿಗೆ ಯಾವುದೇ ಹಾನಿ ಉಂಟಾಗದಂತೆ ಎಚ್ಚರವಹಿಸಬೇಕು. ಅದೇ ರೀತಿ ಪೊಲೀಸ್ ಇಲಾಖೆಯು ಪ್ರಚೋದನಾಕಾರಿ ಪೋಸ್ಟ್ ಹಾಕಿ ಶಾಂತಿ ಕದಡಲು ಯತ್ನಿಸಿದವರ ವಿರುದ್ಧ ಕೂಡಲೇ ಕಾನೂನು ಕ್ರಮ ಕೈಗೊಳ್ಳಬೇಕೆಂದು ನಾಸಿರ್ ಪಾಶ ಪ್ರಕಟನೆಯಲ್ಲಿ ಒತ್ತಾಯಿಸಿದ್ದಾರೆ.

________________________

*_ಕಾವಲ್ ಭೈರಸಂದ್ರದಲ್ಲಿ ಪ್ರಕ್ಷುಬ್ಧ ವಾತಾವರಣ : ಶಾಂತಿ ಕಾಪಾಡಲು ಶಾಸಕ ಯು.ಟಿ ಖಾದರ್ ಮನವಿ_*

ಮಂಗಳೂರು, ಅ.12 : ಲೋಕಕ್ಕೆ ಸೌಹಾರ್ದತೆ, ಸಮಾನತೆ, ಮಾನವೀಯತೆಯ ಸಂದೇಶ ಸಾರಿದ ವಿಶ್ವ ಪ್ರವಾದಿ ಮಹಮ್ಮದ್ ಮುಸ್ತಫಾ (ಸ.ಆ) ರವರನ್ನು ಸಾಮಾಜಿಕ ಜಾಲತಾಣದಲ್ಲಿ ಪ್ರಚೋದನಾಕಾರಿ ಪೋಸ್ಟ್ ಹಾಕಿ ನಿಂದನೆ ಮಾಡಿದ್ದು ಖಂಡನೀಯ ಮತ್ತು ಗಲಭೆ ಯಾರಿಗೂ ಶೋಬೆ ತರುವಂತದ್ದಲ್ಲ ಎಂದು ಯು.ಟಿ ಖಾದರ್ ರವರು ಹೇಳಿದ್ದಾರೆ.

ಯಾವುದೇ ಧರ್ಮದ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತರುವ ಕೃತ್ಯವು ಸಂವಿಧಾನ ವಿರೋಧಿಯಾಗಿದೆ. ಪರಸ್ಪರರ ಧಾರ್ಮಿಕ ನಂಬಿಕೆಗಳನ್ನು ಗೌರವಿಸುವುದು ಪ್ರತಿಯೊಬ್ಬ ನಾಗರಿಕನ ಕರ್ತವ್ಯವಾಗಿದೆ. ಆದರೆ ಇದೇ ನೆಪದಲ್ಲಿ ಕಾನೂನು ಕೈಗೆತ್ತಿಕೊಂಡು ಸಾರ್ವಜನಿಕ ಆಸ್ತಿಪಾಸ್ತಿ ನಷ್ಟಮಾಡುವುದನ್ನು ಸಮರ್ಥಿಸಲು ಸಾಧ್ಯವೇ ಇಲ್ಲ. ಬೆಂಕಿ ಹಚ್ಚುವುದು ನಮ್ಮ‌ ಸಂಸ್ಕೃತಿಯಲ್ಲ. ಏನೇ ಇದ್ದರೂ ಈ ನೆಲದ ಕಾನೂನೇ ಅಂತಿಮ. ಎಲ್ಲರೂ ಶಾಂತಿ ಕಾಪಾಡಬೇಕು. ಕಾನೂನಾತ್ಮಕ ಹೋರಾಟದಲ್ಲಿ ನಂಬಿಕೆಯುಳ್ಳವರಾಗಬೇಕು.

ಸಾಮಾಜಿಕ ಜಾಲತಾಣದಲ್ಲಿ ಪ್ರವಾದಿ ಮಹಮದ್ ಪೈಗಂಬರ್ ನಿಂದನೆ ಮಾಡಿದವರ ವಿರುದ್ದ ಗರಿಷ್ಠ ಕ್ರಮ ಕೈಗೊಳ್ಳಲೇ ಬೇಕು. ಇಂತಹ ಸನ್ನಿವೇಶ ಕೇವಲ ಬೆಂಗಳೂರಷ್ಟೇ ಅಲ್ಲ ರಾಜ್ಯದ ಯಾವುದೇ ಹಳ್ಳಿಯಲ್ಲೂ ಮತ್ತೆ ಯಾವತ್ತು ಮರುಕಳಿಸಬಾರದು.

ಪೋಲಿಸ್ ಇಲಾಖೆ ಕೂಡ ಸಾಮಾಜಿಕ ಜಾಲತಾಣ ಗಳಲ್ಲಿ ಧಾರ್ಮಿಕ ನಿಂದನೆಗಳಂತಹ ಪ್ರಕರಣವನ್ನ ಆರಂಭಿಕ ಹಂತದಲ್ಲೇ ಇತ್ಯಾರ್ಥಗೊಳಿಸಿದರೇ ಪರಿಸ್ಥಿತಿ ಕೈ ಮೀರಿ ಹೋಗುವುದಿಲ್ಲ. ಎಲ್ಲರೂ ಅವರವರ ಜವಾಬ್ದಾರಿಯನ್ನು ಅರಿತುಕೊಂಡು ಕೆಲಸ ಮಾಡಬೇಕಿದೆ ಅಷ್ಟೇ.

ಸಾಮಾಜಿಕ ಮಾಧ್ಯಮದಲ್ಲಿ ಸಮಾಜದ ಸ್ವಾಸ್ಥ್ಯ ವನ್ನು ಹಾಳು ಮಾಡುವ ಪ್ರಚೋದನಕಾರಿ ಪೋಸ್ಟ್ ಹಾಕಿ ಧರ್ಮಗಳ ಮಧ್ಯೆ ಗಲಭೆ ಸೃಷ್ಟಿಮಾಡುವ ಕಿಡಿಗೇಡಿಗಳ ವಿರುದ್ಧ ರಾಜ್ಯ ಸರ್ಕಾರ ಕೂಡಲೇ ಕ್ರಮ ಕೈಗೊಳ್ಳಬೇಕು ಎಂದು ಶಾಸಕ ಯು.ಟಿ ಖಾದರ್ ರವರು ಒತ್ತಾಯಿಸಿದ್ದಾರೆ.

___________________________________

ಪುಲಿಕೇಶಿ ನಗರದ ಕಾಂಗ್ರೆಸ್ ಶಾಸಕ ಅಖಂಡ ಶ್ರೀನಿವಾಸಮೂರ್ತಿ
ಅವರು ಪ್ರತಿಕ್ರಿ ನೀಡಿದ್ದು, ಕಿಡಿಗೇಡಿಗಳ ತಪ್ಪಿಗೆ ಯಾರೂ ಗಲಾಟೆ ಮಾಡಬಾರದು. ತಪ್ಪು ಮಾಡಿದವರಿಗೆ ಕಾನೂನಿನ ಮೂಲಕ ಶಿಕ್ಷೆಯಾಗಲಿ. ಆದರೆ ಯಾವುದೇ ಕಾರಣಕ್ಕೂ ಗಲಾಟೆ ಮಾಡಬೇಡಿ ಎಂದು ವಿನಂತಿಸಿದ್ದಾರೆ.

______________________________

ಜಗತ್ತಿಗೆ ಮಾನವೀಯತೆ ಮತ್ತು ಸುಸಂಸ್ಕೃತಿಯ  ಸಂದೇಶ ನೀಡಿದ ಪೈಗಂಬರ್ ಮುಹಮ್ಮದ್ ಸ್ವಲ್ಲಲ್ಲಾಹು ಅಲೈಹಿವಸಲ್ಲಮ್ ಜಾಗತಿಕ ಮುಸಲ್ಮಾನರ ಹೃದಯ ಸಿಮ್ಹಾಸನದ ರಾಜಕುಮಾರ. ಅವರನ್ನು ನಿಂದನೆ ಮಾಡಿದ ಕಿಡಿಗೇಡಿಗೆ ಗರಿಷ್ಠ ಶಿಕ್ಷೆಯಾಗಲಿ. ಜೊತೆಗೆ ಕಾನೂನನ್ನು ಕೈಗೆತ್ತಿಕೊಂಡು ಪೋಲೀಸರ ವಿರುಧ್ಧ ಹಾಗೂ ಸಾರ್ವಜನಿಕ ಆಸ್ತಿಪಾಸ್ತಿಗೆ ಹಾನಿಯುಂಟು ಮಾಡುವುದು ಪ್ರವಾದಿಯ ಹಿಂಬಾಲಕರಾದ ನಮ್ಮ ಶೈಲಿಯಲ್ಲ. ಎಲ್ಲರೂ ಶಾಂತಿ ಕಾಪಾಡಬೇಕು. ಕಾನೂನಾತ್ಮಕ ಹೋರಾಟದಲ್ಲಿ ನಂಬಿಕೆಯುಳ್ಳವರಾಗಬೇಕು.

Shafi sadi

Member state wakf board

__________________________________

Visited the Incident that is happened at Kaval Byrasandra & D J Halli Police Station in Pulikeshi nagar Constituency

I request every one to Maintain Law & Order, Peace

Please do not take Law in your hands

B z zamir ahmed khan

Mla chamrajpet Bangalore

______________________________________

ಕೆ.ಜಿ.ಹಳ್ಳಿ ಗಲಭೆ ಪ್ರಕರಣ | ಕರ್ಫ್ಯೂ ಜಾರಿ ಮಾಡಿದ ಕಮಿಷನರ್

ಈ ಸಂಬಂಧ ಕಮಿಷನರ್ ಕಮಲ್ ಪಂತ್ ಆದೇಶ ಹೊರಡಿಸಿದ್ದಾರೆ. ಕೆ.ಜಿ.ಹಳ್ಳಿ ಹಾಗೂ ಡಿ.ಜೆ.ಹಳ್ಳಿ ಠಾಣೆ ವ್ಯಾಪ್ತಿಯಲ್ಲಿ ಗುಂಪು ಸೇರಬಾರದು ಎಂದು ಆದೇಶದಲ್ಲಿ ಹೇಳಲಾಗಿದೆ.

ಪರಿಸ್ಥಿತಿ ನಿಯಂತ್ರಣಕ್ಕೆ: ಸದ್ಯ ಪರಿಸ್ಥಿತಿ ಸಂಪೂರ್ಣ ನಿಯಂತ್ರಣಕ್ಕೆ ಬಂದಿದೆ. ಗಲಭೆ ಕೋರರನ್ನು ಬಂಧಿಸಲಾಗುತ್ತಿದೆ. ಸ್ಥಳದಲ್ಲಿ ಬಿಗಿ ಬಂದೋಬಸ್ತ್ ಮಾಡಲಾಗಿದೆ ಎಂದು ಕಮಲ್‌ ಪಂಥ್‌ ಹೇಳಿದ್ದಾರೆ .

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಘಟನಾ ಸ್ಥಳಕ್ಕೆ ಹೆಚ್ಚುವರಿ ಪೊಲೀಸ್‌ ಪಡೆಗಳನ್ನು ನಿಯೋಜಿಸಲಾಗಿದೆ. ಗಲಭೆ ನಿಯಂತ್ರಿಸಲು ಪೊಲೀಸರು ಗುಂಡು ಹಾರಿಸಿದ್ದು ಹಲವರು ಗಾಯಗೊಂಡಿದ್ದಾರೆ. ಈಗ ಸ್ಥಿತಿ ನಿಯಂತ್ರಣಕ್ಕೆ ಬಂದಿದೆ’ ಎಂದು ತಿಳಿಸಿದ್ದಾರೆ.

ಉದ್ರಿಕ್ತರು ಪೊಲೀಸರ ಮೇಲೆ ಹಲ್ಲೆ ಎಸಗಿದ್ದು, ಕಲ್ಲು ತೂರಾಟದಿಂದಾಗಿ ಹಲವರಿಗೆ ಗಾಯಗಳಾಗಿವೆ. ಗಾಯಾಳುಗಳನ್ನು ಆಸ್ಪತ್ರೆಗೆ ರವಾನಿಸಲಾಗಿದೆ. ಗುಂಡೇಟಿನಿಂದ ಒಬ್ಬ ಮೃತಪಟ್ಟಿದ್ದಾರೆ ಎಂದು ಹೇಳಲಾಗಿದ್ದು, ಗಾಯಾಳುಗಳ ಪರಿಸ್ಥಿತಿ ಬೆಳಿಗ್ಗೆ ಗೊತ್ತಾಗಲಿದೆ ಎಂದು ಹೇಳಿದರು.