ಗ್ರಾಮಪಂಚಾಯತ್ ಚುನಾವಣೆಗೆ ಮುಹೂರ್ತ ಫಿಕ್ಸ್, ಡಿಸೆಂಬರ್ 22 ರಂದು ಮೊದಲ ಹಂತದ ಎಲೆಕ್ಷನ್
ಭಾರೀ ಕುತೂಹಲಕ್ಕೆ ಕಾರಣವಾಗಿರುವ ಗ್ರಾಮಪಂಚಾಯತ್ ಚುನಾವಣೆಯ ದಿನಾಂಕ ಕೊನೆಗೂ ಪ್ರಕಟಗೊಂಡಿದೆ. ಬೆಂಗಳೂರಿನಲ್ಲಿ ಸೋಮವಾರ ಸುದ್ದಿಗೋಷ್ಠಿ ನಡೆಸಿದ ರಾಜ್ಯ ಚುನಾವಣಾ ಆಯೋಗ ದಿನಾಂಕವನ್ನು ಘೋಷಣೆ ಮಾಡಿದೆ.
ಬೆಂಗಳೂರು: ಕೋವಿಡ್ ಆತಂಕದ ನಡುವೆಯೂ ಗ್ರಾಮಪಂಚಾಯತ್ ಚುನಾವಣೆಯ ದಿನಾಂಕ ಕೊನೆಗೂ ಘೋಷಣೆಗೊಂಡಿದೆ. ಡಿಸೆಂಬರ್ 22 ರಂದು ಮೊದಲ ಹಂತದ ಚುನಾವಣೆ ನಡೆಯಲಿದ್ದು ಡಿಸೆಂಬರ್ 27 ರಂದು ಎರಡನೇ ಹಂತದ ಮತದಾನ ನಡೆಯಲಿದೆ. ರಾಜ್ಯದ ಒಟ್ಟು 5762 ಗ್ರಾಮ ಪಂಚಾಯತ್ಗಳಿಗೆ ಚುನಾವಣೆ ನಡೆಯಲಿದೆ. ಡಿಸೆಂಬರ್ 30 ರಂದು ಮತಎಣಿಕೆ ನಡೆಯಲಿ
ಬೆಂಗಳೂರಿನಲ್ಲಿ ಸೋಮವಾರ ಪತ್ರಿಕಾಗೋಷ್ಠಿ ನಡೆಸಿದ ಚುನಾವಣಾ ಆಯೋಗಗ್ರಾಮಪಂಚಾಯತ್ ಚುನಾವಣೆಯ ಅಧಿಕೃತ ದಿನಾಂಕವನ್ನು ಘೋಷಣೆ ಮಾಡಿದೆ. ಕೋವಿಡ್ ಹಿನ್ನೆಲೆಯಲ್ಲಿ ಸಾಕಷ್ಟು ಮುನ್ನೆಚ್ಚರಿಕೆಯ ಜೊತೆಗೆ ಚುನಾವಣೆ ನಡೆಯಲಿದೆ ಎಂದು ರಾಜ್ಯ ಚುನಾವಣಾ ಆಯುಕ್ತರು ತಿಳಿಸಿದ್ದಾರೆ.ರಾಜ್ಯದಲ್ಲಿ ಕೋವಿಡ್ ಕಾರಣಕ್ಕಾಗಿ ಎರಡು ಹಂತದಲ್ಲಿ ಚುನಾವಣೆ ನಡೆಯಲಿದೆ. ಒಟ್ಟು ಕರ್ನಾಟಕ ರಾಜ್ಯದ ಎಲ್ಲಾ 6,004 ಗ್ರಾಮ ಪಂಚಾಯತ್ಗಳ ಪೈಕಿ ಕೆಲವು ಗ್ರಾಮಪಂಚಾಯತ್ಗಳನ್ನು ವಿವಿಧ ಕಾರಣಗಳಿಂದಾಗಿ ಚುನಾವಣೆಯಿಂದ ಹೊರಗಿಡಲಾಗಿದೆ. ಎರಡು ಹಂತದಲ್ಲಿ ಒಟ್ಟು 35,884 ಕ್ಷೇತ್ರಗಳ 92,121 ಸದಸ್ಯ ಸ್ಥಾನಗಳಿಗೆ ಚುನಾವಣೆ ನಡೆಯಲಿದೆ.
ಚುನಾವಣೆ ದಿನಾಂಕ ವಿವರ
ಮೊದಲ ಹಂತದ ಮತದಾನ – ಡಿಸೆಂಬರ್ 22
ಎರಡನೇ ಹಂತದ ಮತದಾನ – ಡಿಸೆಂಬರ್ 27
ಮೊದಲ ಹಂತದ ಚುನಾವಣೆಗೆ ನಾಮಪತ್ರ ಸಲ್ಲಿಸುವ ಕೊನೆಯ ದಿನಾಂಕ -ಡಿಸೆಂಬರ್ 11
ಎರಡನೇ ಹಂತದ ಚುನಾವಣೆಗೆ ನಾಮಪತ್ರ ಸಲ್ಲಿಸುವ ಕೊನೆಯ ದಿನಾಂಕ- ಡಿಸೆಂಬರ್ 16ಮೊದಲನೇ ಹಂತದ ಚುನಾವಣೆಯ ನಾಮಪತ್ರ ಹಿಂದಕ್ಕೆ ಪಡೆದುಕೊಳ್ಳಲು ಕೊನೆಯ ದಿನಾಂಕ – ಡಿಸೆಂಬರ್ 14
ಎರಡನೇ ಹಂತದ ಚುನಾವಣೆಯ ನಾಮಪತ್ರ ಹಿಂದಕ್ಕೆ ಪಡೆದುಕೊಳ್ಳಲು ಕೊನೆಯ ದಿನಾಂಕ – ಡಿಸೆಂಬರ್ 19