😡😡😡😡😡😡😡😡😡
*ಸಂವಿಧಾನದ 124ನೇ ತಿದ್ದುಪಡಿ ಮೂಲಕ General category ಬಡವರಿಗೆ ಶೇ10%ಮೀಸಲಾತಿ* ಎಂದು ಪ್ರಚಾರ ಪಡೆದು, ಪ್ರತಿಭಟನೆ ಎದುರಿಸದೇ ಪಾಸಾದ 2019ರ ಬಿಲ್ ಗೆ ಪತ್ರಕರ್ತ ಮಿತ್ರ *ಕುಮಾರ್ ಬರುಡಿಕಟ್ಟಿಯವರ ಈ ಲೇಖನ.*
👇👇👇👇👇👇👇👇👇
*ಮೇಲ್ಜಾತಿಗೆ ನೀಡಿದ 10% ಮೀಸಲಾತಿ ಲಿಂಗಾಯತರು, ಒಕ್ಕಲಿಗರನ್ನೂ ಒಳಗೊಂಡಂತೆ ಇಡೀ ಹಿಂದುಳಿದ ವರ್ಗಗಳಿಗೆ ಮಾಡಿದ ಚಾರಿತ್ರಿಕ ಅನ್ಯಾಯ..*
🥊🥊🥊🥊🥊🥊🥊🥊🥊
ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ಮೇಲ್ಜಾತಿಗಳಿಗೆ ಪಾರ್ಲಿಮೆಂಟಿನಲ್ಲಿ ಅಂಗೀಕಾರವಾದ ಸಂವಿಧಾನ ತಿದ್ದುಪಡಿಮಸೂದೆಯಉದಾಹರಣೆ ಯಾಗಿ *ನಮ್ಮ ಕರ್ನಾಟಕವನ್ನೇ ತೆಗೆದುಕೊಳ್ಳೋಣ. ಇಲ್ಲಿ ಮೀಸಲಾತಿಯ ಪ್ರಮಾಣ ಈ ಕೆಳಗಿನಂತಿದೆ:*
ಈಗ ಮೀಸಲಾತಿಯ ಪ್ರಮಾಣ *ಶೇಕಡ 60ಕ್ಕೆ* ಏರಿದ ನಂತರ
SCs: 15%
STs: 3%
OBC: 32%
(ಕ್ಯಟಗರಿ 1: 4% +
ಕ್ಯಟಗರಿ 2A: 15% +
ಕ್ಯಟಗರಿ 2B: 4% +
ಕ್ಯಟಗರಿ 3A: 4% +
ಕ್ಯಟಗರಿ 3B: 5% = 32%)
ನಮ್ಮ ರಾಜ್ಯದಲ್ಲಿ ಸಾಮಾನ್ಯವಾಗಿ SC / ST ಯಾರು ಎಂಬುದು ಎಲ್ಲರಿಗೂ ಗೊತ್ತಿದೆ. ಆದರೆ, OBC ಯಾರು ಎಂಬುದರ ಬಗ್ಗೆ ಬಹಳಷ್ಟು ಸಾಮಾನ್ಯ ಜನರಿಗೆ ಗೊಂದಲಗಳಿವೆ. ಉದಾಹರಣೆಗೆ, ಬಹಳಷ್ಟು ಲಿಂಗಾಯತರು, ಒಕ್ಕಲಿಗರು ತಾವು OBC ಕ್ಯಟಗರಿಗೆ ಸೇರಿದವರೆಂದು, ತಮಗೂ ಮೀಸಲಾತಿ ಸೌಕರ್ಯ ಕಲ್ಪಿಸಲಾಗಿದೆ ಎಂಬುದನ್ನು ಮರೆತು ತಾವು ಮುಂದುವರಿದವರು ಅಥವಾ ಮೇಲ್ವರ್ಗದವರು ಎಂದು ಭಾವಿಸಿದ್ದಾರೆ. ವಾಸ್ತವದಲ್ಲಿ ಸಾಮಾಜಿಕವಾಗಿ ಅವರು ಮೇಲ್ಜಾತಿಗಳೇ ಆಗಿದ್ದರೂ ಕಾನೂನಿನಡಿಯಲ್ಲಿ ಅವರೂ ಕೂಡ OBC ಕ್ಯಟಗರಿಗೆ ಸೇರಿದ್ದು ಅವರಿಗೂ ಮೀಸಲಾತಿ ಸೌಕರ್ಯವಿದೆ. ಇದನ್ನೇ ಸಾರಾಂಶೀಕರಿಸಿ ಹೇಳುವುದಾದರೆ, ಕರ್ನಾಟಕದ ಮಟ್ಟಿಗೆ SC, ST ಮತ್ತು ಬ್ರಾಹ್ಮಣರನ್ನು ಹೊರತುಪಡಿಸಿದರೆ ಲಿಂಗಾಯತರು, ಒಕ್ಕಲಿಗರು, ಕುರುಬರು, ಈಡಿಗರು ಮುಂತಾದ ಉಳಿದೆಲ್ಲಾ ಸಮುದಾಯಗಳು OBCಯಲ್ಲಿ ಬರುತ್ತವೆ. ಈ ಹಿನ್ನೆಲೆಯಲ್ಲಿ ನಮ್ಮ ಮೀಸಲಾತಿ ಕೋಸ್ಟಕವನ್ನು ಜಾತಿ ಆಧಾರಿತವಾಗಿ ತಯಾರಿಸೋಣ.
1) ಮಾದಿಗರು, ಹೊಲೆಯರು/ಚಲವಾದಿಗಳು, ಲಂಬಾಣಿ, ಭೋವಿ/ವಡ್ಡರ್ ಇತ್ಯಾದಿ 101 ಸಮುದಾಯಗಳಿಗೆ
*(SC) 15% ಮೀಸಲಾತಿ.*
2) ಬೇಡರು/ನಾಯಕರು/ವಾಲ್ಮಿಕಿ, ಹಕ್ಕಿಪಿಕ್ಕಿ, ಜೇನುಕುರುಬ, ಕಾಡುಕುರುಬ, ಕೊರಗ, ಮಲೆಕುಡಿಯ, ಇತ್ಯಾದಿ 49 ಸಮುದಾಯಗಳಿಗೆ
*ST 3% ಮೀಸಲಾತಿ*.
3) *ಕ್ಯಟಗರಿ 1* ರಲ್ಲಿರುವ
ಬೆಸ್ತ, ಉಪ್ಪಾರ, ಗೊಲ್ಲ, ಬೋಯಿ, ಬೋವಿ, ಕುಣಬಿ, ಬುಡಬುಡಕಿ, ದಲಿತ ಕ್ರೈಸ್ತ, ಮೊದಲಾದ 95 ಪ್ರಮುಖ ಜಾತಿಗಳು ಮತ್ತು ಅದರ ಅಡಿಯಲ್ಲಿರುವ 285 ಉಪಜಾತಿಗಳಿಗೆ (ಕೆಲವು ಕಡೆ ಸಂವಾದಿ ಪದಗಳು)
*4% ಮೀಸಲಾತಿ.*
4) *ಕ್ಯಟಗರಿ 2A* ಅಡಿಯಲ್ಲಿರುವ ಅಗಸ,ದೇವಾಡಿಗ,ಈಡಿಗ,ಕುಂಬಾರಕುರುಬ,ವಿಶ್ವಕರ್ಮ,ತಿಗಳ,ದೇವಾಗ,
ಮೊದಲಾದ 102 ಪ್ರಮುಖ ಜಾತಿ ಮತ್ತು ಅದರ ಅಡಿಯಲ್ಲಿಬರುವ 282 ಉಪಜಾತಿಗಳಿಗೆ
*15% ಮೀಸಲಾತಿ*.
5) *ಕ್ಯಟಗರಿ 2B* ಯಲ್ಲಿ ಬರುವ ಮುಸ್ಲೀಮರಿಗೆ *4% ಮೀಸಲಾತಿ.*
6) *ಕ್ಯಟಗರಿ 3A* ನಲ್ಲಿ ಬರುವ ಒಕ್ಕಲಿಗರು/ಗೌಡರು, ಕೊಡಗರು ಮತ್ತು ಬಲಿಜ ಎಂಬ ಮೂರು ಪ್ರಮುಖ ಜಾತಿಗಳು ಮತ್ತು ಅದರ ಅಡಿಯಲ್ಲಿ ಬರುವ 42 ಉಪಜಾತಿ ಗಳಿಗೆ ಸೇರಿ *4% ಮೀಸಲಾತಿ.*
7) *ಕ್ಯಟಗರಿ 3B* ನಲ್ಲಿ ಬರುವ ವೀರಶೈವ, ಲಿಂಗಾಯತರು, ಮರಾಠರು, ಕ್ರಿಶ್ಚಿಯನ್ನರು, ಬಂಟರು, ಜೈನರು ಮತ್ತು ಸತನಿ ಎಂಬ ಆರು ಜಾತಿಗಳು ಹಾಗೂ ಅದರ ಅಡಿಯಲ್ಲಿ ಬರುವ 30 ಉಪಜಾತಿಗಳಿಗೆ– ಹೆಳವ, ಅಂಬಿಗ, ಮಡಿವಾಳ, ಕುಂಬಾರ, ಕುರುಬ ಭಜಂತ್ರಿ, ಅಕ್ಕಸಾಲಿಗ, ಬಡಿಗ, ಮೇದಾರ ಇತ್ಯಾದಿಗಳು)
*5% ಮೀಸಲಾತಿ.*
8) ಈ ಮೇಲಿನ ವರ್ಗಗಳನ್ನು ಹೊರತುಪಡಿಸಿದ ಬಡವರಿಗೆ, ಅಂದರೆ ನಮ್ಮ ರಾಜ್ಯದಲ್ಲಿ ಬ್ರಾಹ್ಮಣರಿಗೆ *10% ಮೀಸಲಾತಿ*
ಈ ವಿವರಣೆಯನ್ನು ಏಕೆ ಕೊಡಬೇಕಾಯಿತು ಎಂದರೆ ಇಂದು ಬ್ರಾಹ್ಮಣರಿಗೆ ಕೊಡುತ್ತಿರುವ 10% ಮೀಸಲಾತಿಯನ್ನು ಬಲವಾಗಿ ಸಮರ್ಥಿಸುತ್ತಿರುವವರಲ್ಲಿ ಬಹುತೇಕರು ಸಮಾಜದಲ್ಲಿ ಮೇಲ್ಪದರದಲ್ಲಿರುವ ಆದರೆ ಕಾನೂನಿನಲ್ಲಿ OBC ಯಲ್ಲಿರುವ *ಒಕ್ಕಲಿಗರು & ಲಿಂಗಾಯತರು* ಅವರು ತಮ್ಮ ತಮ್ಮಕ್ಯಟಗರಿಗಳಾದ 3A ಮತ್ತು 3B ಯನ್ನೊಮ್ಮೆ ನೋಡಿ, ಕರ್ನಾಟಕದ ಜನಸಂಖ್ಯೆಯಲ್ಲಿ ತಮ್ಮ ಜನಸಂಖ್ಯೆ ಎಷ್ಟಿದೆ ಮತ್ತು ತಮಗೆ ಎಷ್ಟು ಮೀಸಲಾತಿ ಕೊಡಲಾಗಿದೆ ಎಂಬುದನ್ನು ಗಮನಿಸಿ ಅದನ್ನು ಬ್ರಾಹ್ಮಣರ ಜನಸಂಖ್ಯೆಗೆ ಮತ್ತು ಅವರಿಗೆ ಈಗ ಕೊಟ್ಟಿರುವ ಮೀಸಲಾತಿಯೊಂದಿಗೆ ಹೋಲಿಸಿಕೊಳ್ಳಬೇಕು.
*ಕ್ಯಟಗರಿ 3A* ಅಡಿಯಲ್ಲಿ ಬರುವ *ಒಕ್ಕಲಿಗರು, ಕೊಡಗರು, ಬಲಿಜ ಮತ್ತು ಇತರ ಉಪಜಾತಿಗಳು ಸೇರಿ ಕರ್ನಾಟಕ ಜನಸಂಖ್ಯೆಯ ಶೇಕಡ *15 % ರಷ್ಟಾಗುತ್ತಾರೆ.* ಅವರಿಗೆ ಸಿಗುತ್ತಿರುವುದು ಕೇವಲ *ಶೇ 4% ಮೀಸಲಾತಿ.*
*ಕ್ಯಟಗರಿ 3B* ನಲ್ಲಿ ಬರುವ *ಲಿಂಗಾಯತರು, ವೀರಶೈವರು, ಕುಂಬಾರರು, ಭಜಂತ್ರಿಗಳು, ಅಕ್ಕಸಾಲಿಗರು/ವಿಶ್ವಕರ್ಮರು, ಮೇದಾರರು, ಕ್ರಿಶ್ಚಿಯನ್ನರು, ಮರಾಠರು, ಬಂಟರು, ಜೈನರು* ಎಲ್ಲಾ ಸೇರಿದರೆ ಕರ್ನಾಟಕದ *ಜನಸಂಖ್ಯೆಯ ಶೇಕಡ 18%* ರಷ್ಟಾಗಿಬಿಡುತ್ತಾರೆ. ಅವರಿಗೆ ಸಿಗುತ್ತಿರುವುದು ಕೇವಲ
*ಶೇ. 5% ರಷ್ಟು ಮೀಸಲಾತಿ.*
😡😡😡😡😡😡😡😡😡
*ಆದರೆ, ಕರ್ನಾಟಕದ ಜನಸಂಖ್ಯೆಯ*
*ಶೇಕಡ 3% ರಷ್ಟಿರುವ ಬ್ರಾಹ್ಮಣರಿಗೆ*
*ಸಿಗುತ್ತಿರುವುದು 10% ಮೀಸಲಾತಿ!*
*ಇಷ್ಟೂ ಅರ್ಥವಾಗದಿದ್ದರೆ ಹೇಗೆ ?*
😡😡😡😡😡😡😡😡😡
ಇನ್ನು ಜನರಲ್ ಕ್ಯಟಗರಿ 50% ನಿಂದ 40%ಗೆ ಇಳಿದಿದ್ದರ ಬಗ್ಗೆ ಮಾತನಾಡೋಣ. ಇಲ್ಲಿಯ ತನಕ ಜನರಲ್ ಕ್ಯಟಗರಿಯಲ್ಲಿ ಸಿಂಹಪಾಲು ಪಡೆಯುತ್ತಾ ಬಂದಿರುವವರು ಬ್ರಾಹ್ಮಣರೇ. ಅದರ ನಂತರದ ಸ್ಥಾನದಲ್ಲಿ ಲಿಂಗಾಯತರು ಮತ್ತು ಒಕ್ಕಲಿಗರು ಬರುತ್ತಾರೆ. ದಲಿತರಿಗೆ ಮತ್ತು OBC ಒಳಗಿನ ಹಿಂದುಳಿದಿರುವ ವರ್ಗಗಳು ಜನರಲ್ ಕ್ಯಟಗರಿಯಲ್ಲಿ ಸ್ಪರ್ಧಿಸಿ ಸ್ಥಾನಗಳನ್ನು ಪಡೆಯುವುದು ಅಪರೂಪ. ಈಗ ಜನರಲ್ ಕ್ಯಟಗರಿಯಿಂದ 10% ಬ್ರಾಹ್ಮಣರ ಕ್ಯಟಗರಿಗೆ ಹೋಗಿದ್ದರಿಂದ ಉಳಿದ 40% ನಲ್ಲಿಯೇ ಮತ್ತೆ ಎಲ್ಲರೂ ಮತ್ತೆ ಗುದ್ದಾಡಬೇಕು. ಈಗ ಅಸಲಿಗೆ ಏನಾಗುತ್ತದೆ ಎಂದರೆ, ಇತ್ತ ಈ 40%ನಲ್ಲಿಯೂ ಬ್ರಾಹ್ಮಣರು ಸಿಂಹಪಾಲು ಪಡೆಯುತ್ತಾರೆ, ಅತ್ತ 10% ಮೀಸಲಾತಿಯಂತೂ ಅವರಿಗೇ ಮೀಸಲು.
*ಒಂದು ಸರಳ ಅಂಕಗಣಿತವನ್ನು ನೋಡೋಣ.*
ಕರ್ನಾಟಕದಲ್ಲಿ 100 ತಹಶೀಲ್ದಾರ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ ಎಂದು ಭಾವಿಸಿಕೊಳ್ಳೋಣ. ಅದಕ್ಕೆ ಈ ಹೊಸ ಮೀಸಲಾತಿಯನ್ನು ಅನ್ವಯಿಸಿದರೆ ಈ ಕೆಳಗಿನಂತೆ ಹಂಚಿಕೆ ಮಾಡಬೇಕಾಗುತ್ತದೆ.
1) ಮಾದಿಗ/ಹೊಲೆಯ/ಚಲವಾದಿ, ಲಂಬಾಣಿ, ಭೋವಿ/ವಡ್ಡರ್ ಇತ್ಯಾದಿ 101 ಸಮುದಾಯಗಳಿಗೆ
*SC : 15 ಸ್ಥಾನಗಳು*
2) ಬೇಡರು/ನಾಯಕರು/ವಾಲ್ಮಿಕಿ, ಹಕ್ಕಿಪಿಕ್ಕಿ, ಜೇನು ಕುರುಬ, ಕಾಡು ಕುರುಬ, ಕೊರಗ, ಮಲೆಕುಡಿಯ, ಇತ್ಯಾದಿ 49 ಸಮುದಾಯಗಳಿಗೆ *ST : 3 ಸ್ಥಾನಗಳು*
3) ಕ್ಯಟಗರಿ 1 ರಲ್ಲಿರುವ 95 ಪ್ರಮುಖ ಜಾತಿಗಳು ಮತ್ತು ಅದರ ಅಡಿಯಲ್ಲಿರುವ 285 ಉಪಜಾತಿಗಳಿಗೆ
*Cat.1 : 4 ಸ್ಥಾನಗಳು.*
4) ಕ್ಯಟಗರಿ 2A ಅಡಿಯಲ್ಲಿ ಬರುವ 102 ಪ್ರಮುಖ ಜಾತಿಗಳು ಮತ್ತು ಅದರ ಅಡಿಯಲ್ಲಿ ಬರುವ 282 ಉಪಜಾತಿಗಳಿಗೆ ಸೇರಿ:
*Cat.2A : 15ಸ್ಥಾನಗಳು*
5) ಕ್ಯಟಗರಿ 2Bಯ ಮುಸ್ಲೀಮರಿಗೆ: *Cat.2B : 4 ಸ್ಥಾನಗಳು*
6) ಕ್ಯಟಗರಿ 3A ನಲ್ಲಿ ಬರುವ ಒಕ್ಕಲಿಗರು/ಗೌಡರು, ಕೊಡಗರು ಮತ್ತು ಬಜಿಜ ಎಂಬ ಮೂರು ಪ್ರಮುಖ ಜಾತಿಗಳು ಮತ್ತು ಅದರ ಅಡಿಯಲ್ಲಿ ಬರುವ 42 ಉಪಜಾತಿ : *Cat.3A : 4 ಸ್ಥಾನಗಳು.*
7) ಕ್ಯಟಗರಿ 3Bನಲ್ಲಿ ಬರುವ ವೀರಶೈವ ಲಿಂಗಾಯತರು, ಮರಾಠರು, ಕ್ರಿಶ್ಚಿಯನ್ನರು, ಬಂಟರು, ಜೈನರು ಮತ್ತು ಸತನಿ ಎಂಬ ಆರು ಜಾತಿಗಳು ಹಾಗೂ ಅದರ ಅಡಿಯಲ್ಲಿ ಬರುವ 30 ಉಪಜಾತಿಗಳು – ಹೆಳವ, ಅಂಬಿಗ, , ಮಡಿವಾಳ, ಕುಂಬಾರ, ಕುರುಬ ಭಜಂತ್ರಿ, ಅಕ್ಕಸಾಲಿಗ/ಬಡಿಗ, ಮೇದಾರ ಇತ್ಯಾದಿಗಳು – ಇವರೆಲ್ಲರಿಗೆ ಸೇರಿ
*Cat 3B : 5 ಸ್ಥಾನಗಳು.*
8) *ಬ್ರಾಹ್ಮಣರಿಗೆ: 10 ಸ್ಥಾನಗಳು.*
ಇದುವರೆಗಿನ ಜನರಲ್ ಕ್ಯಟಗರಿಯ ಉಪಯೋಗದ ಅನುಭವವನ್ನು ನೋಡಿದರೆ ಅಲ್ಲಿ ಉಳಿಯುವ 40 ಸ್ಥಾನಗಳ ಪೈಕಿ 25 ಸ್ಥಾನಗಳು ಬ್ರಾಹ್ಮಣರಿಗೆ ಹೋಗುತ್ತವೆ, 10 ಸ್ಥಾನಗಳಲ್ಲಿ ಲಿಂಗಾಯತರು, ಒಕ್ಕಲಿಗರು ಮತ್ತು ಸಾಪೇಕ್ಷವಾಗಿ ಮುಂದುವರೆದಿರುವ ಇತರ ಸಮುದಾಯಗಳ ಪಾಲಾಗುತ್ತವೆ. ಉಳಿದ 10 ಸ್ಥಾನಗಳನ್ನು ಇತರೇ OBCಅಭ್ಯರ್ಥಿಗಳು ಪಡೆಯುತ್ತಾರೆ .
*ಅಂತಿಮವಾಗಿ 100 ತಹಶೀಲ್ದಾರರ*
*ಪೈಕಿ ಕನಿಷ್ಠ 35 ತಹಶೀಲ್ದಾರರು* *ಬ್ರಾಹ್ಮಣರಾಗಿರುತ್ತಾರೆ*
*10 ತಹಶೀಲ್ದಾರರು* *ಲಿಂಗಾಯತರು, ಬಂಟರು, ಕ್ರಿಶ್ಚಿಯನ್ನರು, ಮರಾಠರ ಸಮುದಾಯಗಳಿಗೆ ಸೇರಿರುತ್ತಾರೆ* (ಜನಸಂಖ್ಯಾ ಪ್ರಮಾಣ ಶೇ,18%)
*10 ತಹಶೀಲ್ದಾರರು ಒಕ್ಕಲಿಗರು, ಕೊಡಗರು,ಬಲಿಜರುಆಗಿರುತ್ತಾರೆ* (ಜನಸಂಖ್ಯಾ ಪ್ರಮಾಣ ಶೇ,15%)
*6 ತಹಶೀಲ್ದಾರರು ಮುಸ್ಲಿ0ರಾಗಿರುತ್ತಾರೆ.*
(ಜನಸಂಖ್ಯಾ ಪ್ರಮಾಣ ಶೇ, 16%)
*18 ತಹಶೀಲ್ದಾರರು ಮಾದಿಗರು, ಹೊಲೆಯರು/ಚಲವಾದಿಗಳು, ಬೋವಿಗಳು/ವಡ್ಡರು ಆಗಿರುತ್ತಾರೆ*
(ಜನಸಂಖ್ಯಾ ಪ್ರಮಾಣ ಶೇ. 20%)
*5 ತಹಶೀಲ್ದಾರರು ವಾಲ್ಮಿಕಿ/ ಬೇಡರು ಮತ್ತು ಇತರ ಬುಡಕಟ್ಟು ಜನರಾಗಿರುತ್ತಾರೆ.*
*6 ತಹಶೀಲ್ದಾರರು ಕುರುಬರು*
*ಉಳಿದ ಸಮುದಾಯಗಳಿಗೆ* *ಸೇರಿದ ತಹಶೀಲ್ದಾರರು 10 ಜನ ಇರುತ್ತಾರೆ.*
*ಈ 10% ಮೀಸಲಾತಿ ಬರದೇ ಹೋಗಿದ್ದರೆ ಬ್ರಾಹ್ಮಣರಿಗೆ 10 ಸ್ಥಾನಗಳು ಕಡಿಮೆ ಸಿಗುತ್ತಿದ್ದವು ಹಾಗೂ ಅವು ಲಿಂಗಾಯತ, ಒಕ್ಕಲಿಗ, ದಲಿತ, ಮುಸ್ಲಿಂ, ಕುರುಬ ಮತ್ತಿತರ ಹಿಂದುಳಿದ ವರ್ಗಗಳ ಪಾಲಾಗುತ್ತಿದ್ದವು*.
ಪ್ರತಿಷ್ಠಿತ ಪತ್ರಿಕೆಗಳು ಒಳಗೊಂಡಂತೆ ಎಲ್ಲಾ ಮಾಧ್ಯಮಗಳು ಈ ವಿಷಯ ತಪ್ಪಾಗಿ ವರದಿ ಮಾಡಿದವು.ಇಷ್ಟೆಲ್ಲಾ ದೊಡ್ಡ ಮಟ್ಟದ ಅನ್ಯಾಯ ವಾಗು ತ್ತಿದ್ದರೂ ದೇಶಾದ್ಯಂತ ಪ್ರತಿರೋಧ ಏಕೆ ಭುಗಿಲೇಳುತ್ತಿಲ್ಲ? ಅಂದರೆ
ಇದರಲ್ಲಿ *ಎರಡು ಅಂಶಗಳು* ಕೆಲಸ ಮಾಡಿವೆ.
*ಮೊದಲನೆಯದು,* ಈಗಾಗಲೇ ಮೀಸಲಾತಿ ಪಡೆಯುತ್ತಿರುವ ದಲಿತರು, ಲಂಬಾಣಿಗಳು, ವಡ್ಡರು, ಬೇಡರು, ಕುರುಬರು,ಮುಸ್ಲೀಮರು, ಲಿಂಗಾಯತರು, ಒಕ್ಕಲಿಗರಿಗೆ ಯಾವತೊಂದರೆಯೂಆಗುವುದಿಲ್ಲ, ಅವರಿಗೆ ನೀಡಿರುವ ಮೀಸಲಾತಿಯ
ಎಳ್ಳಷ್ಟನ್ನೂ ಕಿತ್ತುಕೊಳ್ಳುವುದಿಲ್ಲ ಎಂದು ಹೇಳಲಾಗಿದೆ. ಅದು ನಿಜ ಕೂಡ. ನಮ್ಮ ಮೀಸಲಾತಿಗೇನೂ ತೊಂದರೆಯಾಗಿಲ್ಲವಲ್ಲ ಅಂತ ಈ ಸಮುದಾಯಗಳ ನಾಯಕರುಗಳು ಸುಮ್ಮನಾಗಿದ್ದಾರೆ.
*ಎರಡನೆಯದಾಗಿ,* ಮೇಲ್ಜಾತಿಯ ಬಡವರಿಗೆ ಅಥವಾ ಆರ್ಥಿಕವಾಗಿ ಹಿಂದುಳಿದವರಿಗೆ ಮೀಸಲಾತಿ ಕೊಡ ಲಾಗುತ್ತಿದೆ ಎಂದು ಬಿಂಬಿಸಲಾಗಿದೆ. ಬಡವರು ಅಂದಾಗಅವರಿಗೂಕೂಡ
ಸೌಲಭ್ಯ ದೊರಕಲಿ ಬಿಡು ಎಂಬ ಭಾವನೆ ಮೂಡಿರುವುದಕ್ಕೆ ಸಾಕು. *ಇನ್ನೊಂದೆಡೆ ಮೇಲ್ಜಾತಿಯ ಬಡವ ಅಂದಾಕ್ಷಣ ಸಮಾಜದಲ್ಲಿ ವಾಸ್ತವ ದಲ್ಲಿ ಮೇಲ್ಜಾತಿಗಳೇ ಆಗಿರುವ *ಲಿಂಗಾಯತರು ಮತ್ತು ಒಕ್ಕಲಿಗರು ತಮಗೂ ಇದರಲ್ಲಿ ಪಾಲು ಸಿಗುತ್ತೆ ಎಂಬುವುದಾಗಿ ಭ್ರಮಿಸಿರಲಿಕ್ಕೂ ಸಾಧ್ಯವಿದೆ.*
ಸಾರಾಂಶ ಇಷ್ಟೆ. 👇👇👇👇👇ಅತ್ಯಂತ *ಮುಂದುವರಿದ ಹಾಗೂ ಜನಸಂಖ್ಯೆಯಲ್ಲಿ ತೀರಾ ಕಡಿಮೆ ಇರುವ ಜಾತಿಯೊಂದಕ್ಕೆ ಅತ್ಯಂತ ಹಿಂದುಳಿದ ಜಾತಿಗಳಿಗಿಂತಲೂ, ಜನಸಂಖ್ಯೆಯಲ್ಲಿ ಅತ್ಯಂತ ಹೆಚ್ಚಿರುವ ಜಾತಿಗಳಿಗಿಂತಲೂ ಹೆಚ್ಚಿನ ಮೀಸಲಾತಿಯನ್ನು ಒದಗಿಸಲಾಗಿದೆ. ಮೇಲಾಗಿ ಈ ಜಾತಿಯಲ್ಲಿ ಇರುವ ಬಡವರ ಸಂಖ್ಯೆಗಿಂತಲೂ ಹೆಚ್ಚು ಮೀಸಲಾತಿ ನೀಡಲಾಗಿದೆ. ಇದು ಸಾಮಾಜಿಕ ನ್ಯಾಯ ನೀತಿಯ ಅಣಕವಾಗುತ್ತದೆ. ಮೀಸಲಾತಿ ಉದ್ದೇಶ ಏನಾಗಿದೆಯೋಅದನ್ನೇ ಅಪಹಾಸ್ಯಮಾಡಿದಂತಾಗುತ್ತದೆ.*
🥊🥊🥊🥊🥊🥊🥊🥊
*ಮೋದಿಸರ್ಕಾರದಈನಿರ್ಣಯ*
*ತಾವುಕಳೆದುಕೊಂಡಿದ್ದೇನೆ0ಬ್ದು*
*ಲಿಂಗಾಯತರಿಗೆ, ಒಕ್ಕಲಿಗರಿಗೆ, ಕುರುಬರಿಗೆ, ಮುಸ್ಲೀಮರಿಗೆ, ದಲಿತರಿಗೆ, ಬೇಡರಿಗೆ ಮತ್ತು ಇತರೆ ಹಿಂದುಳಿದ ವರ್ಗಗಳಿಗೆ ಈಗಲೂ ಅರ್ಥವಾಗದಿದ್ದರೆ ಯಾರೇನು ಮಾಡೋಕಾಗುತ್ತದೆ ?*
🥊🥊🥊🥊🥊🥊🥊🥊🥊