ದಿ ಮೈಸೂರು ಎಲೆಕ್ಟ್ರಿಕಲ್ ಇಂಡಸ್ಟ್ರೀಸ್ ಲಿಮಿಟೆಡ್‍ವತಿಯಿಂದ ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ ದೇಣಿಗೆ

ಬೆಂಗಳೂರು, ಜೂನ್ 14, :
ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ ದಿ ಮೈಸೂರು ಎಲೆಕ್ಟ್ರಿಕಲ್ ಇಂಡಸ್ಟ್ರೀಸ್ ಲಿಮಿಟೆಡ್ ಸಂಸ್ಥೆ ಇಂದು 1,53,30,200 ರೂ.ಗಳ ಚೆಕ್‍ನ್ನು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ರವರಿಗೆ ಹಸ್ತಾಂತರಿಸಿದರು.
ಕಂಪನಿಯ ಉತ್ಪಾದನೆಯ ಲಾಭಾಂಶದ ಶೇ.2 ರಷ್ಟನ್ನು ಮುಖ್ಯಮಂತ್ರಿ ಪರಿಹಾರ ನಿಧಿಗೆ ನೀಡಿದೆ. ಈ ಸಂದರ್ಭದಲ್ಲಿ ಮೈಸೂರು ಎಲೆಕ್ಟ್ರಿಕಲ್ ಇಂಡಸ್ಟ್ರೀಸ್ ಲಿಮಿಟೆಡ್‍ನ ಅಧ್ಯಕ್ಷರಾದ ಸಂತೋಷ್‍ಕುಮಾರ್ ರೈ ಬೋಳಿಯಾರ್ ಅವರು ಸೇರಿದಂತೆ ಹಲವರು ಉಪಸ್ಥಿತರಿದ್ದರು.

—————

ಸುತ್ತೂರು ಸ್ವಾಮಿಗಳ ಮಾತೃಶ್ರೀ ನಿಧನಕ್ಕೆ ವಾರ್ತಾ ಸಚಿವರಿಂದ ತೀವ್ರ ಸಂತಾಪ
ಬೆಂಗಳೂರು, ಜೂನ್ 14,  :
ಮೈಸೂರಿನ ಸುತ್ತೂರು ಶ್ರೀಮಠದ ಪರಮಪೂಜ್ಯ ಜಗದ್ಗುರುಗಳ ಪೂರ್ವಾಶ್ರಮದ ಮಾತೃಶ್ರೀ ಶ್ರೀಮತಿ ಶಿವನಾಗಮ್ಮರವರು ಇಂದು ಶಿವೈಕ್ಯರಾಗಿದ್ದಾರೆ. ಅವರ ನಿಧನಕ್ಕೆ ಸಣ್ಣ ಕೈಗಾರಿಕಾ ಹಾಗೂ ವಾರ್ತಾ ಸಚಿವ ಸಿ.ಸಿ ಪಾಟೀಲ್ ಅವರು ತೀವ್ರ ಶೋಕ ವ್ಯಕ್ತಪಡಿಸಿದ್ದಾರೆ.
ಹಿರಿಯರಾದ ಶ್ರೀಮತಿ ಶಿವನಾಗಮ್ಮರವರ ಆತ್ಮಕ್ಕೆ ಚಿರಶಾಂತಿ ದೊರಕಲಿ ಎಂದು ನಾವೆಲ್ಲರೂ ಪ್ರಾರ್ಥಿಸೋಣ. ಅವರ ಅಗಲಿಕೆಯಿಂದ ಕುಟುಂಬಕ್ಕೆ ಉಂಟಾಗಿರುವ ಭರಿಸಲಾಗದ ನೋವನ್ನು ಸಹಿಸುವ ಶಕ್ತಿಯನ್ನು ಭಗವಂತನು ಕರುಣಿಸಲಿ ಹಾಗೂ ಅವರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಸಿ.ಸಿ. ಪಾಟೀಲ್ ಅವರು ತಮ್ಮ ಸಂದೇಶದಲ್ಲಿ ತಿಳಿಸಿದ್ದಾರೆ.