*ಪತ್ರಿಕಾ ಪ್ರಕಟಣೆ*

*ಡಿಸೆಂಬರ್ 17, ಶುಕ್ರವಾರ ಸಂಜೆ ಮಂಗಳೂರು ಪುರಭವನದಲ್ಲಿ ಪದ್ಮವಿಭೂಷಣ ಪುರಸ್ಕೃತರಾದ ಶ್ರೀ ವಿಶ್ವೇಶತೀರ್ಥ ಸ್ವಾಮೀಜಿ ಪೇಜಾವರ ಮತ್ತು ಡಾ. ಬಿ. ಎಂ. ಹೆಗ್ಡೆ ಹಾಗೂ ಪದ್ಮಶ್ರೀ ಪುರಸ್ಕೃತರಾದ ಹರೇಕಳ ಹಾಜಬ್ಬರಿಗೆ ಸನ್ಮಾನ ಕಾರ್ಯಕ್ರಮ*

ಮರಣೋತ್ತರ ಪದ್ಮವಿಭೂಷಣ ಪ್ರಶಸ್ತಿ ಪುರಸ್ಕೃತರಾದ ಶ್ರೀ ವಿಶ್ವೇಶ ತೀರ್ಥ ಸ್ವಾಮೀಜಿ ಪೇಜಾವರ, ಪದ್ಮ ವಿಭೂಷಣ ಪ್ರಶಸ್ತಿ ಪುರಸ್ಕೃತರಾದ ಡಾ. ಬಿ ಎಂ ಹೆಗ್ಡೆ ಮತ್ತು ಪದ್ಮಶ್ರೀ ಪುರಸ್ಕೃತರಾದ ಅಕ್ಷರ ಸಂತ ಹರೇಕಳ ಹಾಜಬ್ಬರಿಗೆ ಬಿ ಹ್ಯೂಮನ್ ವತಿಯಿಂದ ಸನ್ಮಾನ ಕಾರ್ಯಕ್ರಮವು ಡಿಸೆಂಬರ್ 17 ಶುಕ್ರವಾರ ಸಂಜೆ 6.30 ಕ್ಕೆ ಮಂಗಳೂರು ಪುರಭವನದಲ್ಲಿ ನಡೆಯಲಿದೆ. ಶ್ರೀ ವಿಶ್ವೇಶ ತೀರ್ಥ ಸ್ವಾಮೀಜಿ ಪೇಜಾವರ ರವರ ಪರವಾಗಿ ಶ್ರೀ ವಿಶ್ವಪ್ರಸನ್ನ ಸ್ವಾಮೀಜಿ ಪೇಜಾವರ ಸನ್ಮಾನವನ್ನು ಸ್ವೀಕರಿಸಲಿದ್ದಾರೆ.

ಈ ಸನ್ಮಾನ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಶ್ರೀ ವಿಶ್ವಪ್ರಸನ್ನ ಸ್ವಾಮೀಜಿ ಪೇಜಾವರ, ಮಂಗಳೂರಿನ ಮೇಯರ್ ಶ್ರೀ ಪ್ರೇಮಾನಂದ ಶೆಟ್ಟಿ, ಮಂಗಳೂರು ಸಂಸದರಾದ ಶ್ರೀ ನಳಿನ್ ಕುಮಾರ್ ಕಟೀಲ್, ಮಂಗಳೂರು ಶಾಸಕರಾದ ಶ್ರೀ ಯು ಟಿ ಖಾದರ್, ಮಂಗಳೂರು ದಕ್ಷಿಣ ಶಾಸಕ ರಾದ ಶ್ರೀ ವೇದವ್ಯಾಸ ಕಾಮತ್, ಮಂಜೇಶ್ವರ ಶಾಸಕರಾದ ಎ.ಕೆ.ಎಂ ಅಶ್ರಫ್, ವಿಧಾನ ಪರಿಷತ್ ಸದಸ್ಯರಾದ ಶ್ರೀ ಬಿ ಎಂ ಫಾರೂಖ್, ಮಾಜಿ ಎಂಎಲ್ ಸಿ ಶ್ರೀ ಐವನ್ ಡಿಸೋಜ, ಜಿಲ್ಲಾಧಿಕಾರಿಗಳಾದ ಡಾ. ಕೆ ವಿ ರಾಜೇಂದ್ರ ಐಎಎಸ್, ಮಂಗಳೂರು ಮಹಾನಗರ ಪಾಲಿಕೆಯ ಕಮಿಷನರ್ ಶ್ರೀ ಅಕ್ಷಯ್ ಶ್ರೀಧರ್ ಐಎಎಸ್, ಮಂಗಳೂರು ಡಿಸಿಪಿ ಹರಿರಾಮ್ ಶಂಕರ್ ಐಪಿಎಸ್, ಮಂಗಳೂರು ಧರ್ಮಪ್ರಾಂತ್ಯದ ಪಿ.ಆರ್.ಒ ಶ್ರೀ ರಾಯ್ ಕ್ಯಾಸ್ಟಲಿನೊ, ಬ್ಯಾರೀಸ್ ಚೇಂಬರ್ ಆಫ್ ಕಾಮರ್ಸ್& ಇಂಡಸ್ಟ್ರೀಸ್ ನ ಅಧ್ಯಕ್ಷರಾದ ಶ್ರೀ ಎಸ್ ಎಂ ರಶೀದ್ ಹಾಜಿ, ಹಿದಾಯ ಫೌಂಡೇಶನ್ ನ ಅಧ್ಯಕ್ಷರಾದ ಮನ್ಸೂರ್ ಅಹ್ಮದ್ ಆಝಾದ್ ಮೊದಲಾದವರು ಭಾಗವಹಿಸಲಿದ್ದಾರೆ. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಬಿ ಹ್ಯೂಮನ್ ಮಂಗಳೂರು ಘಟಕದ ಅಧ್ಯಕ್ಷರಾದ ಅಧ್ಯಕ್ಷರಾದ ಉದ್ಯಮಿ ಮೊಹಮ್ಮದ್ ಅಮೀನ್ ಎಚ್ ಎಚ್ ವಹಿಸಲಿದ್ದಾರೆ. ಅಲ್ಲದೆ ಈ ಕಾರ್ಯಕ್ರಮದಲ್ಲಿ ಅನೇಕ ರಾಜಕೀಯ, ಶೈಕ್ಷಣಿಕ,ಸಾಮಾಜಿಕ ಗಣ್ಯರು, ವಿವಿಧ ಸಂಘ ಸಂಸ್ಥೆಗಳ ಪ್ರತಿನಿಧಿಗಳು ಭಾಗವಹಿಸಲಿದ್ದಾರೆ.

ದೇಶದ ಅತ್ಯುನ್ನತ ನಾಗರಿಕ ಪ್ರಶಸ್ತಿಗಳನ್ನು ಪಡೆದು ನಮ್ಮ ಜಿಲ್ಲೆಗೆ ಮತ್ತು ನಮ್ಮ ರಾಜ್ಯಕ್ಕೆ ಕೀರ್ತಿ ತಂದ ನಮ್ಮ ಜಿಲ್ಲೆಯ ಹೆಮ್ಮೆಯ ಈ ಮೂವರು ಸಾಧಕರಿಗೆ ನಡೆಸಲಿರುವ ಸನ್ಮಾನ ಕಾರ್ಯಕ್ರಮಕ್ಕೆ ಎಲ್ಲರನ್ನೂ ಪ್ರೀತಿಯಿಂದ ಆಮಂತ್ರಿಸುತ್ತಿದ್ದೇವೆ.

*ನಿರಂತರ ಮಾನವೀಯ ಸೇವೆಯ ಮೂಲಕ ಸಾರ್ಥಕತೆಯನ್ನು ಕಾಣುತ್ತಿರುವ ಬಿ ಹ್ಯೂಮನ್ ಸಂಸ್ಥೆ ಯ ವತಿಯಿಂದ ನಡೆಸಲ್ಪಡುವ ಈ ವಿಶಿಷ್ಟ ಕಾರ್ಯಕ್ರಮಕ್ಕೆ ವ್ಯಾಪಕ ಪ್ರಚಾರ ಕೊಡಬೇಕಾಗಿ ಎಲ್ಲಾ ಮಾಧ್ಯಮ ಮಿತ್ರರಲ್ಲಿ ವಿನಂತಿ.*
ಅಧ್ಯಕ್ಷರು ಬಿ ಹ್ಯೂಮನ್ ಮಂಗಳೂರು ಘಟಕ