ಸದನದಲ್ಲಿ ಜಲೀಲ್ ಹತ್ಯೆ ಕೇಸ್ ಸದ್ದು

  1. , ಬೆಳಗಾವಿಯ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಅಧಿವೇಶನದಲ್ಲಿ ಮಂಗಳೂರಿನ ಸುರತ್ಕಲ್​ ನಿವಾಸಿ ಜಲೀಲ್ ಹತ್ಯೆ ಪ್ರಕರಣವನ್ನು ವಿಪಕ್ಷ ಉಪ ನಾಯಕ ಯು.ಟಿ.ಖಾದರ್ ಪ್ರಸ್ತಾಪ ಮಾಡಿದರು. ಅನಾವಶ್ಯಕ ಗಲಾಟೆಗೆ ಸರ್ಕಾರ ಕ್ರಮ ತಗೊಂಡಿದ್ರೆ, ಅಲ್ಲಿ ಒಂದು ಕೊಲೆ ಆಗುತ್ತಿರಲಿಲ್ಲ ಎಂದು ಸರ್ಕಾರದ ವಿರುದ್ಧ ಕಿಡಿಕಾರಿದರು. ಅನೈತಿಕ ಗೂಂಡಾಗಿರಿ ಮಾಡುವರನ್ನು ಬೆಳಗ್ಗೆ ಬಂಧಿಸಿ, ಸಂಜೆ ಬಿಡುಗಡೆ ಮಾಡುತ್ತಾರೆ. ಕೊಲೆ ಮಾಡಿದವರ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳಬೇಕು ಎಂದು ಯು.ಟಿ.ಖಾದರ್ ಆಗ್ರಹಿಸಿದರು. ಜಲೀಲ್ ಹತ್ಯೆ ಬಗ್ಗೆ ಉನ್ನತ ತನಿಖೆ ಆಗಬೇಕು. ಅಲ್ಲದೇ ಕೊಲೆಯಾದ ವ್ಯಕ್ತಿಯ ಕುಟುಂಬಸ್ಥರಿಗೆ ಸೂಕ್ತ ಪರಿಹಾರ ಕೊಡಬೇಕು ಎಂದು ಸರ್ಕಾರವನ್ನು ಯು.ಟಿ.ಖಾದರ್ ಒತ್ತಾಯಿಸಿದ್ದರು.