ಸಾಂಸ್ಕೃತಿಕವಾಗಿ ಶ್ರೀಮಂತವಾಗಿರುವ ಕೊಪ್ಪಳದ ಯಲಬುರ್ಗದಲ್ಲಿ ಸಾರ್ವಜನಿಕ ಸಭೆಯನ್ನುದ್ದೇಶಿಸಿ ಬಿಜೆಪಿ ರಾಷ್ಟ್ರಾಧ್ಯಕ್ಷ ಜೆಪಿ ನಡ್ದ ಮಾತನಾಡಿದರು. ಅಲ್ಲದೆ ಕಲ್ಬುರ್ಗಿ, ಸೇಡಂ, ಮದ್ದೂರು ಮೊದಲಾದ ಹಲವಾರು ವಿಧಾನಸಭಾ ಕ್ಷೇತ್ರಗಳಲ್ಲಿ ಚುನಾವಣಾ ಪ್ರಚಾರ ರೋ ,ರೋಡ್ ಶೋ , ಗಣ್ಯರೊಂದಿಗೆ ಮಾತುಕತೆ ನಡೆಸಿದರು.ಈ ಚುನಾವಣೆ ಕರ್ನಾಟಕದ ಭವಿಷ್ಯವನ್ನು ನಿರ್ಧರಿಸಲಿದೆ. ನಮ್ಮ ಸರ್ಕಾರ ರಾಜ್ಯದ ಪ್ರಗತಿ ಮತ್ತು ಸಮಗ್ರ ಅಭಿವೃದ್ಧಿಯತ್ತ ನಿರಂತರವಾಗಿ ಗಮನ ಹರಿಸುತ್ತಿದೆ. ಮತ್ತೊಮ್ಮೆ ಸ್ಪಷ್ಟ ಬಹುಮತದೊಂದಿಗೆ ಡಬಲ್ ಎಂಜಿನ್ ಸರ್ಕಾರವನ್ನು ಬೆಂಬಲಿಸಿ. ಎಂದು ಕರ್ನಾಟಕದ ಮತದಾರರಲ್ಲಿ ವಿನಂತಿಸಿದರು.












