ಬೆಂಗಳೂರು ನಗರ ಜಿಲ್ಲೆ,  : ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಟ್ರಸ್ಟ್‌ ಮತ್ತು ಕೆನರಾ ಬ್ಯಾಂಕ್‌ನ ಸಹಯೋಗದಲ್ಲಿ ರುಡ್‌ಸೆಟ್‌ ಸಂಸ್ಥೆಯ ವತಿಯಿಂದ ಕಂಪ್ಯೂಟರ್‌ ಡಿಟಿಪಿ ಕುರಿತ 45 ದಿನಗಳ ಉಚಿತ ತರಬೇತಿಯನ್ನು ಹಮ್ಮಿಕೊಳ್ಳಲಾಗಿದ್ದು, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ರಾಮನಗರ ಹಾಗೂ ತುಮಕೂರು ಜಿಲ್ಲಾ ವ್ಯಾಪ್ತಿಯ ಗ್ರಾಮೀಣ ಆಸಕ್ತ ಯುವಕ/ ಯುವತಿಯರಿಂದ ಅರ್ಜಿ ಆಹ್ವಾನಿಸಲಾಗಿದೆ.
ಆಸಕ್ತರು 18 ರಿಂದ 45ರ ವಯೋಮಾನದವರಾಗಿದ್ದು, ಹೆಸರನ್ನು ನೋಂದಾಯಿಸಲು ಜುಲೈ 31 ಕೊನೆಯ ದಿನವಾಗಿದೆ. ಆಸಕ್ತರು ಅರ್ಜಿಯನ್ನು ಗೂಗಲ್ ಫಾರ್ಮ್ ಲಿಂಕ್ https://docs.google.com/forms/d/e/1FAIpQLSd6_EphjQf06zNFLdaapM4JnBLenbByyWtv52n2V1rtlPLLRA/viewform?usp=sf_link ಬಳಸಿ ಸಲ್ಲಿಸಬಹುದು ಅಥವಾ ಹೆಚ್ಚಿನ ಮಾಹಿತಿಗಾಗಿ ರುಡ್‌ಸೆಟ್‌ ಸಂಸ್ಥೆ, ಅರಿಶಿನಕುಂಟೆ, ನೆಲಮಂಗಲ ತಾಲ್ಲೂಕು, ಬೆಂಗಳೂರು ಗ್ರಾಮಾಂತರ ಜಿಲ್ಲೆ, ಮೊಬೈಲ್‌ ಸಂಖ್ಯೆ: 9113880324, 9740982585, 8884554510, 9241482541 ಮೂಲಕ ಸಂಪರ್ಕಿಸಬಹುದು ಎಂದು ರುಡ್‌ಸೆಟ್‌ ಸಂಸ್ಥೆಯ ಬೆಂಗಳೂರು ಶಾಖೆಯ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
********