ಈಜಿಪ್ಟ್ ಅಧ್ಯಕ್ಷರೊಂದಿಗೆ ಪ್ರಧಾನಿ ನರೇಂದ್ರ ಮೋದಿ ಮಾತುಕತೆ

ಇಬ್ಬರೂ ನಾಯಕರು ಪಶ್ಚಿಮ ಏಷ್ಯಾದ ಪರಿಸ್ಥಿತಿ ಮತ್ತು ಅದರ ವ್ಯಾಪಕ ಪರಿಣಾಮಗಳ ಬಗ್ಗೆ ಚರ್ಚಿಸಿದರು

ಉಭಯ ನಾಯಕರು ಭಯೋತ್ಪಾದನೆ, ಹಿಂಸಾಚಾರ ಮತ್ತು ನಾಗರಿಕರ ಪ್ರಾಣಹಾನಿ ಬಗ್ಗೆ ಕಳವಳ ಹಂಚಿಕೊಂಡಿದ್ದಾರೆ

ಇಸ್ರೇಲ್-ಪ್ಯಾಲೆಸ್ಟೈನ್ ವಿಷಯದಲ್ಲಿ ಭಾರತದ ದೀರ್ಘಕಾಲೀನ ಮತ್ತು ತತ್ವಬದ್ಧ ನಿಲುವನ್ನು ಪ್ರಧಾನಿ ಪುನರುಚ್ಚರಿಸಿರು

ಪ್ಯಾಲೆಸ್ಟೈನ್ ಜನತೆಗೆ ಭಾರತದ ಅಭಿವೃದ್ಧಿ ಪಾಲುದಾರಿಕೆ ಮತ್ತು ಮಾನವೀಯ ನೆರವನ್ನು ಬಿಂಬಿಸಿದ ಪ್ರಧಾನಮಂತ್ರಿ

ಶಾಂತಿ ಮತ್ತು ಸ್ಥಿರತೆಯನ್ನು ಶೀಘ್ರವಾಗಿ ಪುನಃಸ್ಥಾಪಿಸುವ ಅಗತ್ಯವನ್ನು ಇಬ್ಬರೂ ನಾಯಕರು ಒಪ್ಪಿಕೊಂಡರು

 

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಈಜಿಪ್ಟ್ ಅಧ್ಯಕ್ಷ ಘನತೆವೆತ್ತ ಶ್ರೀ ಅಬ್ದೆಲ್ ಫತಾಹ್ ಎಲ್-ಸಿಸಿ ಅವರೊಂದಿಗೆ ದೂರವಾಣಿ ಸಂಭಾಷಣೆ ನಡೆಸಿದರು.

ಇಬ್ಬರೂ ನಾಯಕರು ಪಶ್ಚಿಮ ಏಷ್ಯಾದ ಪ್ರಸ್ತುತ ಪರಿಸ್ಥಿತಿ ಮತ್ತು ಈ ಪ್ರದೇಶ ಮತ್ತು ವಿಶ್ವದ ಮೇಲೆ ಅದರ ಪರಿಣಾಮಗಳ ಬಗ್ಗೆ ಚರ್ಚಿಸಿದರು.

ಇಬ್ಬರೂ ನಾಯಕರು ಭಯೋತ್ಪಾದನೆ, ಹಿಂಸಾಚಾರ ಮತ್ತು ನಾಗರಿಕ ಜೀವಗಳ ನಷ್ಟದ ಬಗ್ಗೆ ತಮ್ಮ ಹಂಚಿಕೆಯ ಕಳವಳವನ್ನು ವ್ಯಕ್ತಪಡಿಸಿದರು.

ಇಸ್ರೇಲ್-ಪ್ಯಾಲೆಸ್ಟೈನ್ ವಿಷಯದಲ್ಲಿ ಭಾರತದ ದೀರ್ಘಕಾಲೀನ ಮತ್ತು ತತ್ವಬದ್ಧ ನಿಲುವನ್ನು ಪ್ರಧಾನಮಂತ್ರಿ ಪುನರುಚ್ಚರಿಸಿದರು.

ಪ್ಯಾಲೆಸ್ಟೈನ್ ಜನತೆಗೆ ಭಾರತದ ಅಭಿವೃದ್ಧಿ ಪಾಲುದಾರಿಕೆ ಮತ್ತು ಮಾನವೀಯ ನೆರವನ್ನು ಪ್ರಧಾನಿ ಬಿಂಬಿಸಿದರು.

ಶಾಂತಿ ಮತ್ತು ಸ್ಥಿರತೆಯನ್ನು ಶೀಘ್ರವಾಗಿ ಪುನಃಸ್ಥಾಪಿಸುವ ಮತ್ತು ಮಾನವೀಯ ಸಹಾಯವನ್ನು ಸುಗಮಗೊಳಿಸುವ ಅಗತ್ಯವನ್ನು ಉಭಯ ನಾಯಕರು ಒಪ್ಪಿಕೊಂಡರು.