ಮಾನ್ಯ ಉಪಮುಖ್ಯ ಮಂತ್ರಿಗಳು ಹಾಗೂ ಕೆಪಿಸಿಸಿ ಅದ್ಯಕ್ಷರಾದ ಶ್ರೀ ಡಿಕೆ ರವರು ಇಂದು ರಾಮನಗರ ಹಾಗೂ ಕನಕಪುರ ಸರ್ಕಾರಿ ವೈದ್ಯಕೀಯ ಮಹಾವಿದ್ಯಾಲಯ ಸ್ಥಾಪನೆ ಹಾಗೂ ಕಾರ್ಯಾರಂಭ ಸಂಬಂಧ ಇಂದು ಸಭೆ ನಡೆಸಿ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದರು
ರಾಜೀವ್ ಗಾಂಧಿ ವೈದ್ಯಕೀಯ ವಿವಿಯನ್ನು ಹಂತ ಹಂತವಾಗಿ ರಾಮನಗರಕ್ಕೆ ಸ್ಥಳಾಂತರ ಹಾಗೂ ಕನಕಪುರ ಮೆಡಿಕಲ್ ಕಾಲೇಜಿಗೆ ಮೂಲಸೌಕರ್ಯ ಹೆಚ್ಚಿಸಿ ನ್ಯಾಷನಲ್ ಮೆಡಿಕಲ್ ಕಮಿಷನ್‌ಗೆ ಮರು ಅರ್ಜಿ ಸಲ್ಲಿಸಲು ತೀರ್ಮಾನಿಸಲಾಗಿದೆ. ರಾಮನಗರದಲ್ಲಿ ಕಟ್ಟಡ ನಿರ್ಮಾಣಕ್ಕೆ ಇರುವ ಭೂ ಸ್ವಾಧೀನ ಸಮಸ್ಯೆಗೆ ಪರಿಹಾರ ನೀಡಿ ಕಾಮಗಾರಿ ನಡೆಸಲಾಗುತ್ತಿದೆ. ರಾಮನಗರದಲ್ಲಿ ಮೆಡಿಕಲ್ ಕಾಲೇಜು ಪ್ರಾರಂಭ ಮಾಡಲು ಅಗತ್ಯ ಮೂಲಭೂತ ಸೌಕರ್ಯ ಒದಗಿಸಲಾಗುತ್ತಿದೆ. ವೈದ್ಯಕೀಯ ವಿವಿ ಕೇಂದ್ರ ಕಚೇರಿಯನ್ನು ರಾಮನಗರಕ್ಕೆ ಸ್ಥಳಾಂತರಗೊಳಿಸಲು ಸೂಚಿಸಿದ್ದೇನೆ. ಈ ವಿಚಾರವಾಗಿ ಈ ಹಿಂದೆ ಸರ್ಕಾರಿ ಆದೇಶ ಹೊರಡಿಸಲಾಗಿದ್ದು, ಹಂತ ಹಂತವಾಗಿ ಸ್ಥಳಾಂತರಿಸಲಾಗುವುದು ಹಾಗೂ
ಕನಕಪುರದಲ್ಲಿ ಮೆಡಿಕಲ್ ಕಾಲೇಜು ಸ್ಥಾಪಿಸಲು ಬಜೆಟ್’ನಲ್ಲಿ ಘೋಷಣೆ ಮಾಡಲಾಗಿತ್ತು. ಗೃಹ ಮಂಡಳಿಯಿಂದ ಜಮೀನು ಪಡೆದು ಕಾಲೇಜು ಕಟ್ಟಡ ನಿರ್ಮಾಣ ಮಾಡಲಾಗುವುದು. ಕನಕಪುರದಲ್ಲಿ ಮೂಲಸೌಕರ್ಯ ಇಲ್ಲ ಎಂದು ಎನ್ಎಂಸಿಯಿಂದ ಅರ್ಜಿ ತಿರಸ್ಕರಿಸಲಾಗಿತ್ತು. ಹೀಗಾಗಿ ಮೂಲಸೌಕರ್ಯ ಹೆಚ್ಚಿಸಿ ಮತ್ತೆ ಹೊಸದಾಗಿ ಅರ್ಜಿ ಸಲ್ಲಿಸಲು ಇಂದಿನ ಸಭೆಯಲ್ಲಿ ತೀರ್ಮಾನಿಸಲಾಗಿದೆ.
ಹಿಂದೆ ಕನಕಪುರದಲ್ಲಿ ಮೆಡಿಕಲ್ ಕಾಲೇಜು ಆರಂಭಿಸಲು ಟೆಂಡರ್ ಕರೆದು ಭೂಮಿ ಪೂಜೆ ಮಾಡಲಾಗಿತ್ತು. ನಂತರ ಯಡಿಯೂರಪ್ಪನವರ ಸರ್ಕಾರದಲ್ಲಿ ಮಾಜಿ ಸಚಿವ ಸುಧಾಕರ್ ಅವರು ಚಿಕ್ಕಬಳ್ಳಾಪುರಕ್ಕೆ ಆ ಮೆಡಿಕಲ್ ಕಾಲೇಜು ತೆಗೆದುಕೊಂಡು ಹೋದರು. ಆಗ ₹450 ಕೋಟಿ ಇದ್ದ ಮೆಡಿಕಲ್ ಕಾಲೇಜು ನಿರ್ಮಾಣ ವೆಚ್ಚ ₹850 ಕೋಟಿಗೆ ಏರಿಕೆಯಾಗಿದೆ.
ಬಿಜೆಪಿ ದ್ವೇಷದ ರಾಜಕಾರಣ ಮಾಡಿದೆ. ನಾವು ಬಜೆಟ್’ನಲ್ಲಿ ಇದನ್ನು ಘೋಷಿಸಿದ್ದು, ಇದನ್ನು ಹಂತ ಹಂತವಾಗಿ ಪೂರ್ಣಗೊಳಿಸುತ್ತೇವೆ. ಕಾಲೇಜು ನಿರ್ಮಾಣಕ್ಕೆ ಅನುಮತಿ ನೀಡುವಂತೆ ಮರು ಅರ್ಜಿ ಹಾಕುತ್ತೇವೆ. ರಾಮನಗರದಲ್ಲಿನ ಕಟ್ಟಡ ಕಾಮಗಾರಿಗೆ ₹600 ಕೋಟಿ ಬಿಡುಗಡೆಯಾಗಿದ್ದು, ಕೆಲಸ ಭರದಿಂದ ಸಾಗುತ್ತಿದೆ. ನಾವು ಅಭಿವೃದ್ಧಿ ವಿಚಾರದಲ್ಲಿ ರಾಜಕಾರಣ ಮಾಡುವುದಿಲ್ಲ.ರಾಜೀವ್ ಗಾಂಧಿ ವಿವಿ ಕೇಂದ್ರ ಕಚೇರಿ ರಾಮನಗರದಲ್ಲಿ ನಿರ್ಮಾಣ ಮಾಡಬೇಕು ಎಂದು 2008ರಲ್ಲೇ ಸರ್ಕಾರದ ಆದೇಶ ಹೊರಡಿಸಿ ಬಿಲ್ ಮಂಡಿಸಲಾಗಿದೆ. ಇದನ್ನು ಹಂತ ಹಂತವಾಗಿ ಸ್ಥಳಾಂತರ ಮಾಡಲಾಗುವುದು. ಎಂದು ತಿಳಿಸಿದರು.