ಬೆಂಗಳೂರಿನ ಡಾ.ಬಿ.ಆರ್. ಅಂಬೇಡ್ಕರ್ ಭವನದಲ್ಲಿ ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡ ಪದವೀಧರರ ಸಂಘ ಆಯೋಜಿಸಿದ್ದ ವಿಧಾನಪರಿಷತ್ ವಿಪಕ್ಷ ನಾಯಕರಾದ ಶ್ರೀ ಛಲವಾದಿ ನಾರಾಯಣಸ್ವಾಮಿ ಅವರ ಅಭಿನಂದನಾ ಸಮಾರಂಭದ ಉದ್ಘಾಟನೆ ನೆರವೇರಿಸಲಾಯಿತು.
ಸ್ವಾತಂತ್ರ್ಯಾ ನಂತರ ಈ ದೇಶದಲ್ಲಿ ಪರಿಶಿಷ್ಟ ಜಾತಿ ಮತ್ತು ಪಂಗಡಗಳಿಗೆ ಆರ್ಥಿಕವಾಗಿ, ಔದ್ಯೋಗಿಕವಾಗಿ, ರಾಜಕೀಯವಾಗಿ ಶಕ್ತಿ ಕೊಡುವ ಪ್ರಾಮಾಣಿಕ ಪ್ರಯತ್ನ ಏನಾದರೂ ನಡೆದಿದ್ದರೆ ಕೇಂದ್ರ ಹಾಗೂ ರಾಜ್ಯದ ಬಿಜೆಪಿ ಸರ್ಕಾರದ ಅವಧಿಯಲ್ಲಿ ಮಾತ್ರ. ಪರಿಶಿಷ್ಟ ಸಮುದಾಯಗಳ ಪರ ನಿರಂತರ ದನಿಯಾಗಿ ಹೋರಾಟ ನಡೆಸಿಕೊಂಡು ಬಂದ ಮಾನ್ಯ ಛಲವಾದಿ ನಾರಾಯಣ ಸ್ವಾಮಿಯವರ ಆಯ್ಕೆ ಬಿಜೆಪಿಯ ಸಾಮಾಜಿಕ ನ್ಯಾಯದ ಬದ್ಧತೆಯ ನಿರ್ಧಾರವಾಗಿದ್ದು ಅವರನ್ನು ಆತ್ಮೀಯವಾಗಿ ಅಭಿನಂದಿಸಲಾಯಿತು.
ಈ ಸಂದರ್ಭದಲ್ಲಿ ಪರಮಪೂಜ್ಯ ಸಿದ್ದರಾಮ ಬೆಲ್ದಾಳ ಶ್ರೀಗಳು, ಪೂಜ್ಯ ಜ್ಞಾನ ಪ್ರಕಾಶ ಶ್ರೀಗಳು, ಪೂಜ್ಯ ಬಸವನಾಗಿದೇವ ಶರಣರು, ಪರಮಪೂಜ್ಯ ಸೇವಾಲಾಲ್ ಸರ್ದಾರ್ ಶ್ರೀಗಳು ದಿವ್ಯ ಸಾನಿಧ್ಯ ವಹಿಸಿದ್ದರು. ಪಕ್ಷದ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿಗಳಾದ ಶ್ರೀ @blsanthosh ಜೀ ಅವರು, ವಿಧಾನ ಪರಿಷತ್ ವಿರೋಧ ಪಕ್ಷ ನಾಯಕರಾದ ಶ್ರೀ @NswamyChalavadi, ಮಾಜಿ ಉಪ ಮುಖ್ಯಮಂತ್ರಿಗಳಾದ ಶ್ರೀ @GovindKarjol, ಮಾಜಿ ಸಚಿವರು ಹಾಗೂ ರಾಜ್ಯ ಉಪಾಧ್ಯಕ್ಷರಾದ ಶ್ರೀ ಎನ್.ಮಹೇಶ್, ಪ್ರಧಾನ ಕಾರ್ಯದರ್ಶಿಗಳಾದ ಶ್ರೀ ಪಿ.ರಾಜೀವ್, ಮಾಜಿ ಸಂಸದರಾದ ಶ್ರೀ ಮುನಿಸ್ವಾಮಿ,ರಾಜ್ಯ ಉಪಾಧ್ಯಕ್ಷರಾದ ಶ್ರೀ ಹರತಾಳು ಹಾಲಪ್ಪ, ಶಾಸಕರಾದ ಶ್ರೀ ಬಸವರಾಜ್ ಮತ್ತೀಮಡು, ಮುಖಂಡರಾದ ಶ್ರೀ ವೆಂಕಟಸ್ವಾಮಿ, ಶ್ರೀ ರುದ್ರಯ್ಯನವರು, ಶ್ರೀ ವೈ ಸಂಪಂಗಿ ಅವರು ಸೇರಿದಂತೆ ಪರಿಶಿಷ್ಟ ಸಮುದಾಯದ ಪ್ರಮುಖರು ಉಪಸ್ಥಿತರಿದ್ದರು.












