“ಬಿಜೆಪಿ ಅಭ್ಯರ್ಥಿ ಗೆಲುವಿಗೆ
ಸಂಡೂರು ತಾಯಂದಿರ ಆಶೀರ್ವಾದ”
ಸಂಡೂರು ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಅಂಗವಾಗಿ ಕುಡುತಿನಿ ಯಲ್ಲಿ ಆಯೋಜಿಸಿದ್ದ ಕಾರ್ಯಕರ್ತರು ಹಾಗೂ ಮತದಾರರ ಸಭೆಯನ್ನು ಉದ್ಘಾಟಿಸಲಾಯಿತು. ಉಪ ಸಮರದಲ್ಲಿ ನಮ್ಮ ಎನ್.ಡಿ.ಎ ನೇತೃತ್ವದ ಬಿಜೆಪಿ ಅಭ್ಯರ್ಥಿ ಶ್ರೀ ಬಂಗಾರು ಹನುಮಂತು ಅವರನ್ನು ಆಶೀರ್ವದಿಸುವಂತೆ ಮನವಿ ಮಾಡಲಾಯಿತು. ಸಭೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಆಶೀರ್ವದಿಸಿದ ತಾಯಂದಿರ ಹಾರೈಕೆ ಪ್ರಚಂಡ ಗೆಲುವಿನ ವಿಶ್ವಾಸ ಹೆಚ್ಚಿಸಿತು.
ಈ ಸಂದರ್ಭದಲ್ಲಿ ಅಭ್ಯರ್ಥಿ ಶ್ರೀ ಬಂಗಾರು ಹನುಮಂತು, ಮಾಜಿ ಸಚಿವರಾದ ಶ್ರೀ @GaliJanardhanar, ಶ್ರೀ @sriramulubjp, ಎಸ್.ಸಿ.ಮೋರ್ಚಾ ರಾಜ್ಯಾಧ್ಯಕ್ಷರು ಹಾಗೂ ಶಾಸಕರಾದ ಶ್ರೀ @CementManju, ಯುವ ಮೋರ್ಚಾ ರಾಜ್ಯಾಧ್ಯಕ್ಷರು ಹಾಗೂ ಶಾಸಕರಾದ ಶ್ರೀ @dheerajmuniraj, ವಿಧಾನ ಪರಿಷತ್ ಸದಸ್ಯರಾದ ಶ್ರೀ ನವೀನ್, ಮಾಜಿ ಶಾಸಕರಾದ ಶ್ರೀ ಸೋಮಶೇಖರ್ ರೆಡ್ಡಿ, ರಾಜ್ಯ ಕಾರ್ಯದರ್ಶಿ ಶ್ರೀ ದಿವಾಕರ್, ಶ್ರೀ ಶರಣು ತಳ್ಳೀಕೇರಿ, ಜಿಲ್ಲಾಧ್ಯಕ್ಷರಾದ ಶ್ರೀ ಅನಿಲ್ ಕುಮಾರ್ ಸೇರಿದಂತೆ ಬಿಜೆಪಿ ಹಾಗೂ ಜೆಡಿಎಸ್ ಪಕ್ಷಗಳ ಮುಖಂಡರು, ಪದಾಧಿಕಾರಿಗಳು, ಕಾರ್ಯಕರ್ತರು ಹಾಗೂ ಮತದಾರರು ಉಪಸ್ಥಿತರಿದ್ದರು.
#Byelections2024 #SanduruByElection
Vijayendra
President
Bjp Karnataka