ಮಾಜಿ ಪ್ರಧಾನಿ, ಭಾರತ ರತ್ನ ದಿ. ಅಟಲ್ ಬಿಹಾರಿ ವಾಜಪೇಯಿ ಅವರ 100ನೇ ಜನ್ಮದಿನದ ಸ್ಮರಣಾರ್ಥ ಹಾಗೂ ಸುಶಾಸನ ದಿನದ ಅಂಗವಾಗಿ ಇಂದು ಮಾಜಿ ಮುಖ್ಯಮಂತ್ರಿಗಳಾದ ಶ್ರೀ ಬಿ. ಎಸ್.‌ ಯಡಿಯೂರಪ್ಪ ಮತ್ತು ರಾಜ್ಯಾಧ್ಯಕ್ಷರಾದ ಶ್ರೀ ವಿಜಯೇಂದ್ರ ಯಡಿಯೂರಪ್ಪ ಅವರು ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಏರ್ಪಡಿಸಲಾಗಿದ್ದ ಪ್ರದರ್ಶಿನಿ ಮತ್ತು ಸಭಾ ಕಾರ್ಯಕ್ರಮವನ್ನು ಉದ್ಘಾಟಿಸಿದರು ಮತ್ತು ಪಕ್ಷದ ಹಿರಿಯರು ಹಾಗೂ ಮಾಜಿ ಸಚಿವರಾದ ಶ್ರೀ ರಾಮಚಂದ್ರ ಗೌಡ ಅವರನ್ನು ಸನ್ಮಾನಿಸಿದರು.

ಈ ಸಂದರ್ಭದಲ್ಲಿ ಮಾಜಿ ಮುಖ್ಯಮಂತ್ರಿಗಳಾದ ಶ್ರೀ ಡಿ. ವಿ. ಸದಾನಂದ ಗೌಡ, ಶ್ರೀ ಬಸವರಾಜ ಎಸ್.‌ ಬೊಮ್ಮಾಯಿ, ಕೇಂದ್ರ ಸಚಿವರಾದ ಶ್ರೀ ಪ್ರಲ್ಹಾದ್ ಜೋಶಿ, ಶೋಭಾ ಕರಂದ್ಲಾಜೆ, ಪ್ರತಿಪಕ್ಷ ನಾಯಕರಾದ ಶ್ರೀ ಆರ್. ಅಶೋಕ್, ವಿಧಾನ ಪರಿಷತ್‌ ವಿಪಕ್ಷ ನಾಯಕರಾದ ಶ್ರೀ ಛಲವಾದಿ ನಾರಾಯಣಸ್ವಾಮಿ, ಮಾಜಿ ಸಚಿವರಾದ ಶ್ರೀ ಮುನಿರತ್ನ, ವಿಧಾನಪರಿಷತ್ ಸದಸ್ಯರಾದ ಶ್ರೀ ಎನ್. ರವಿಕುಮಾರ್, ರಾಜ್ಯ ಮುಖ್ಯ ವಕ್ತಾರರಾದ ಶ್ರೀ ಅಶ್ವತ್ಥ ನಾರಾಯಣ, ಮಹಿಳಾ ಮೋರ್ಚಾ ರಾಜ್ಯ ಅಧ್ಯಕ್ಷರಾದ ಕು. ಸಿ. ಮಂಜುಳಾ, ಸುಶಾಸನ ದಿನದ ರಾಜ್ಯ ಸಹ-ಸಂಚಾಲಕರಾದ ಶ್ರೀ ಜಗದೀಶ್ ಹಿರೇಮನಿ, ಬೆಂಗಳೂರು ದಕ್ಷಿಣ ಜಿಲ್ಲಾಧ್ಯಕ್ಷರಾದ ಶ್ರೀ ಸಿ. ಕೆ. ರಾಮಮೂರ್ತಿ, ಬೆಂಗಳೂರು ಉತ್ತರ ಜಿಲ್ಲಾಧ್ಯಕ್ಷರಾದ ಶ್ರೀ ಎಸ್. ಹರೀಶ್, ಬೆಂಗಳೂರು ಕೇಂದ್ರ ಜಿಲ್ಲಾಧ್ಯಕ್ಷರಾದ ಶ್ರೀ ಸಪ್ತಗಿರಿ ಗೌಡ, ಪದಾಧಿಕಾರಿಗಳು ಮತ್ತು ಪ್ರಮುಖರು ಉಪಸ್ಥಿತರಿದ್ದರು.

#AtalJanmShatabdi #AtalBihariVajapayee #GoodGovernanceDa