- ಕರ್ನಾಟಕ ಬ್ಯಾರೀಸ್ ಸೋಶಿಯಲ್ ಎಂಡ್ ಕಲ್ಚರಲ್ ಫಾರಂ ಆಯೋಜಿಸುವ
ಸೌಹಾರ್ದ ಬ್ಯಾರಿ ಉತ್ಸವ 2025 ಸಂಘಟನಾ ಸಮಿತಿಯ ವತಿಯಿಂದ ಮಂಗಳೂರಿನ ಕರಾವಳಿ ಉತ್ಸವ ಮೈದಾನದಲ್ಲಿ ಬ್ಯಾರಿ ಸೌಹಾರ್ದ ಉತ್ಸವವನ್ನು 2025 ರ ಎಪ್ರಿಲ್ 19,20 ಆಯೋಜಿಸಲಾಗಿದೆ. ಈ ಉತ್ಸವದಲ್ಲಿ ಬ್ಯಾರಿ ಜನಾಂಗದ ವೈಶಿಷ್ಟ್ಯತೆ, ಸಂಸ್ಕೃತಿ, ಸೌಹಾರ್ದತೆ, ಕೊಡುಗೆಗಳು, ಸಾಧನೆಗಳು, ಪರಂಪರೆಗಳನ್ನು ಪ್ರತಿಬಿಂಬಿಸುವ ಜೊತೆಗೆ ಯುವ ಜನಾಂಗಕ್ಕೆ ದಿಕ್ಸೂಚಿಯಾಗುವ ಹಾಗೂ ಬಹು ಭಾಷಾ ಸಂಸ್ಕೃತಿಗಳನ್ನು ಪ್ರಸ್ತುತ ಪಡಿಸುವ ವೈವಿಧ್ಯಮಯ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದ್ದೇವೆ.
ದಿನಾಂಕ, 19-4-2025 ಶನಿವಾರ ಬೆಳಿಗ್ಗೆ 10ಗಂಟೆಗೆ ಉದ್ಘಾಟನೆಗೊಂಡ ದಿನಾಂಕ 20-4-2025 ರಂದು 7 ಗಂಟೆಗೆ ಸಮಾರೋಪ ಸಮಾರಂಭ ಜರುಗಲಿದೆ. ಈ ಮೂರು ದಿನಗಳಲ್ಲಿ ವೈವಿಧ್ಯಮಯ ಸಾಂಸ್ಕೃತಿಕ ಕಾರ್ಯಕ್ರಮಗಳು, ಆಹಾರ ಮೇಳ ನಡೆಯಲಿದೆ. ಅದೇ ರೀತಿ ಕೆಳಕಂಡ ಸಬಲೀಕರಣ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ.
ದಿನಾಂಕ –19 -4-2025 ರಂದು ಬೆಳಿಗ್ಗೆ 10 ಗಂಟೆಯಿಂದ ಕರ್ನಾಟಕ ಸರಕಾರದ ಕೌಶಲ್ಯಾಭಿವೃದ್ಧಿ ಇಲಾಖೆಯ ಸಹಯೋಗದಲ್ಲಿ, ಕರ್ನಾಟಕದ ಪ್ರತಿಷ್ಠಿತ ವಿಶ್ವವಿದ್ಯಾಲಯದ ನೇತೃತ್ವದಲ್ಲಿ ಉದ್ಯೋಗ ಮೇಳ ನಡೆಯಲಿದೆ. ಕರಾವಳಿ ಕರ್ನಾಟಕದಲ್ಲಿ ಪ್ರಥಮ ಬಾರಿಗೆ ಒಂದೇ ಕಡೆ ದೇಶ ವಿದೇಶದ 100 ಕ್ಕಿಂತ ಹೆಚ್ಚು ಪ್ರಖ್ಯಾತ ಕಂಪೆನಿಗಳು ಇಲ್ಲಿ ಸೇರಲಿದ್ದು ಕರಾವಳಿ ಭಾಗ ಉದ್ಯೋಗ ಆಕಾಂಕ್ಷಿಗಳು ಇದರ ಸದುಪಯೋಗ ಪಡೆಯಬಹುದು. ದುಬಾಯಿ, ಸೌದಿ ಅರೇಬಿಯಾ, ಕತಾರ್ ಸೇರಿಂದ ಮಿಡಲ್ ಈಸ್ಟ್ ನ ಕಂಪೆನಿಗಳು ಇಲ್ಲಿನ ಯುವಕ — ಯುವತಿಯರಿಗೆ ಉದ್ಯೋಗ ಅವಕಾಶ ಕೊಡಲು ಈ ಮೇಳದಲ್ಲಿ ಭಾಗವಹಿಸಲಿದೆ. ಇದು ಕೇವಲ ಒಂದು ದಿನಕ್ಕೆ ಸೀಮಿತ ಆಗದೇ ಇಲ್ಲಿ ದಾಖಲು ಮಾಡಿದ ಉದ್ಯೋಗ ಆಕಾಂಕ್ಷಿ ಅಭ್ಯರ್ಥಿಗಳನ್ನು ನಾವು ನಿರಂತರ ಸಂಪರ್ಕದಲ್ಲಿ ಇರಿಸಿ ಅವರಿಗೆ ಮಾರ್ಗದರ್ಶನ ಮತ್ತು ಪ್ರೋತ್ಸಾಹ ಮಾಡಲು ಅನುಕೂಲ ಆಗುವಂತೆ ಒಂದು ಜಾಬ್ ಪ್ಲೇಸ್ ಮೆಂಟ್ ಕಚೇರಿ ತೆರೆದಿದ್ದು ಅಲ್ಲಿ ನುರಿತ ಟ್ರೈನರ್ ಗಳು ಇವರಿಗೆ ಜಾಬ್ ಇಂಟರ್ವ್ಯೂ ತರಭೇತಿ ಮತ್ತು ಕೌಶಲ್ಯ ನೀಡಿ ಮುಂದೆಯೂ ಅವರಿಗೆ ಉದ್ಯೋಗ ಸಿಗುವಂತೆ ಮಾಡಲು ಅನುಕೂಲ ಮಾಡಿ ಕೊಡಲಿದೆ. ಈ ಸೇವೆ ನಿರಂತರ ಸಂಪೂರ್ಣ ಉಚಿತವಾಗಿ ನಡೆಯಲಿದೆ. ಈಗಾಗಲೇ ದುಬಾಯಿಲ್ಲಿ ಬ್ಯಾರಿ ಮೇಳ ನಡೆಸಿದ ಆಯೋಜಕರು ಅಲ್ಲಿನ ನೂರಾರು ಕಂಪೆನಿಗಳ ನೆಟ್ವರ್ಕ್ ಮಾಡಿದ್ದಾರೆ ಅವರು ಈ ಮೇಳದಲ್ಲಿ ರಿಜಿಸ್ಟರ್ ಆಗುವ ಅಭ್ಯರ್ಥಿಗಳಿಗೆ ಉದ್ಯೋಗ ಅವಕಾಸಕ್ಕೆ ಸಹಾಯ ಮಾಡಲಿದ್ದಾರೆ.
20-4-2025 ರಂದು ಬೆಳಿಗ್ಗೆ 10 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ಶೈಕ್ಷಣಿಕ ಮೇಳ ನಡೆಯಲಿದೆ. ಈಗಾಗಲೇ ಕರಾವಳಿಯಲ್ಲಿ ಶೈಕ್ಷಣಿಕ ಕ್ಷೇತ್ರದಲ್ಲಿ ಬಹಳಷ್ಟು ಸಾದನೆ ಮಾಡಿದ
ಪುತ್ತೂರು ಕಮ್ಯೂನಿಟಿ ಸೆಂಟರ್ ನ 100 ಕ್ಕಿಂತ ಹೆಚ್ಚು ಅನುಭವಿ ಕೌನ್ಸಿಲರ್ ಗಳು, ಮೆನ್ಟರ್ಸ್ ಗಳು ಈ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳಿಗೆ ಒನ್ ಟೂ ಒನ್ ಕೌನ್ಸಿಲಿಂಗ್ ಮಾಡಲಿದ್ದಾರೆ.
ಇದರಲ್ಲಿ ವಿದ್ಯಾರ್ಥಿಗಳಿಗೆ ವೃತ್ತಿ ಮಾರ್ಗದರ್ಶನ, ಕಾಲೇಜು ಮತ್ತು ಜಾಗತಿಕ ಉದ್ಯೋಗ ಬೇಡಿಕೆ ಇರುವ ಕೋರ್ಸ್ ಗಳ ಮಾಹಿತಿ, ಸ್ಪರ್ಧಾತ್ಮಕ ಪರೀಕ್ಷೆಯ ಮಾರ್ಗದರ್ಶನ ಮತ್ತು ಕೌನ್ಸಿಲಿಂಗ್ ಗಳ ದಾಖಲೆ ಹಾಗೂ ನೋಂದಾವಣಿ ಬಗ್ಗೆ ಮಾಹಿತಿ ನೀಡಲಿದ್ದೇವೆ. ಸರಕಾರಿ ಮತ್ತು ಪ್ರೈವೇಟ್ ವಿದ್ಯಾರ್ಥಿ ವೇತನ ಮಾಹಿತಿ ನೀಡಲಿದ್ದೇವೆ. ವಿಶೇಷವಾಗಿ 85 % ಹೆಚ್ಚು ಅಂಕ ಪಡೆದು ದ್ವಿತೀಯ ಪಿಯುಸಿ ಪರೀಕ್ಷೆ ಪಾಸಾದ ವಿದ್ಯಾರ್ಥಿಗಳಿಗೆ ಅಭಿನಂದನೆ ಮತ್ತು ಪ್ರೋತ್ಸಾಹ ಸಿಗಲಿದೆ.
ಅದೇ ದಿನ 11 ಗಂಟೆಗೆ ಉದ್ಯಮ ಮೇಳ ನಡೆಯಲಿದ್ದು ಇದರಲ್ಲಿ ಸಣ್ಣ ಹಾಗೂ ದೊಡ್ಡ ಉದ್ಯಮಗಳಿಗೆ ಉದ್ಯಮದ ಪ್ರಗತಿಯ ಹಾದಿಯಲ್ಲಿ ನಿರ್ವಹಿಸಬೇಕಾದ ಕ್ರಮ, ನೀತಿ ಮತ್ತು ಸ್ಟ್ರಾಟಜಿ ಗಳ ಬಗ್ಗೆ, ಹೂಡಿಕೆ, ಬೇಡಿಕೆ ಮತ್ತು ಹೊಸ ಆಲೋಚನೆಯ ಪ್ರೋತ್ಸಾಹ ವಾತಾವರಣ ನಿರ್ಮಿಸಲಿದ್ದೇವೆ.
ಅದೇ ದಿನ 20 ರಂದು ಉಚಿತ ವೈದ್ಯಕೀಯ ಶಿಬಿರ ತಪಾಸಣಾ ಶಿಬಿರ ನಡೆಯಲಿದ್ದು, ರಕ್ತದಾನ ಶಿಬಿರವನ್ನೂ ಆಯೋಜಿಸಲಾಗಿದೆ.
ಈ ಎಲ್ಲಾ ಕಾರ್ಯಕ್ರಮವನ್ನು ವೃತ್ತಿಪರ ಉತ್ಸಾಹಿ ಯುವಕರು ಸಂಘಟಿಸಿದ್ದಾರೆ. ಆದಷ್ಟು ಹೆಚ್ಚು ಜನರು ಇದರ ಪ್ರಯೋಜನ ಪಡೆಯಬೇಕು. ಎಲ್ಲಾ ಧರ್ಮೀಯ ಯುವಕರು – ಯುವತಿಯರು, ಹಿರಿಯರು ಮತ್ತು ಕಿರಿಯರು ಇದರ ಸದುಪಯೋಗ ಪಡೆದು ನಾಡಿನ ಸೌಹಾರ್ದತೆ ಮತ್ತು ಅಭಿವೃದ್ಧಿಯಲ್ಲಿ ಪಾಲು ಸೇರಬೇಕು ಎಂದು ವಿನಂತಿಸುತ್ತೇವೆ.
The Souharda Beary Utsav 2025 Organizing Committee, organized by the Karnataka Beary Social and Cultural Forum, is hosting the Beary Souharda Utsav on April 19, and 20, 2025, at the Karavali Utsav Ground in Mangalore. This festival showcases the uniqueness, culture, harmony, contributions, achievements, and heritage of the Beary community, while also serving as a guide for the youth and presenting multilingual cultures.
The inauguration ceremony will take place on Saturday April 19, 2025, at 4 pm, and the closing ceremony will be held on April 20, 2025, at 7 pm. Over the three-day event, various cultural programs and a food fair will be held.
Empowerment programs include a job fair on April 19, 2025, at 10 am, in collaboration with the Skill Development Department of the Government of Karnataka and a prestigious Presidency Foundation Bangalore. This event will bring together over 100 renowned companies from India and abroad, providing employment opportunities for young men and women in the coastal region. Companies from the Middle East, including Dubai, Saudi Arabia, and Qatar, will participate in the fair.
A job placement office will be available to facilitate contact between job seekers and employers, offering job interview training and skills development. This service will be provided continuously and free of charge.
On April 20, 2025, from 10 am to 5 pm, an educational fair will be held, featuring one-to-one counseling with over 100 experienced counselors and mentors from the Puttur Community Center. Students will receive career guidance, information on in-demand courses, competitive exam guidance, and information on government and private scholarships. Students who have passed the second PUC examination with over 85% marks will be honoured and encouraged.
A business Expo will also be held on April 20, 2025, at 11 am, focusing on investment, demand, and new ideas for small and large enterprises.
Additionally, a free medical camp, check-up camp, and blood donation camp will be organized.
These programs have been organized by professional and enthusiastic youth, aiming to benefit as many people as possible. We invite all to participate and contribute to the harmony and development of the country.












