ಕರ್ನಾಟಕ ಕ್ರಿಶ್ಚಿಯನ್ ಸಮುದಾಯ ಅಭಿವೃದ್ಧಿ ನಿಗಮ ನಿಯಮಿತ (KCCDC) ಅಧಿಕೃತ ವೆಬ್ ಸೈಟ್ ಮತ್ತು ಯೋಜನೆಗಳನ್ನು ಇಂದು ಕರ್ನಾಟಕ ಸರ್ಕಾರದ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಮಾನ್ಯ ಸಚಿವರಾದ ಬಿ.ಝಡ್. ಜಮೀರ್ ಅಹಮದ್ ಖಾನ್ ಅವರು ಲೋಕಾರ್ಪಣೆ ಮಾಡಿದರು. ನಿಗಮದ ಅಧ್ಯಕ್ಷರಾದ ಶ್ರೀ ಪ್ರೊ. ಜಾಫೆಟ್, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿಗಳಾದ ಶ್ರೀ ನಸೀರ್ ಅಹ್ಮದ್, ಕರ್ನಾಟಕ ಅಲ್ಪಸಂಖ್ಯಾತ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಶ್ರೀ ಅಲ್ತಾಫ್ ಖಾನ್, ವಿಧಾನ ಪರಿಷತ್ ಸದಸ್ಯರಾದ ಶ್ರೀ ಅಬ್ದುಲ್ ಜಬ್ಬಾರ್, ಕರ್ನಾಟಕ ಕ್ರಿಶ್ಚಿಯನ್‌ ಸಮುದಾಯ ಅಭಿವೃದ್ದಿ ನಿಗಮ ನಿಯಮಿತದ ಆಡಳಿತ ಮಂಡಳಿಯ ಸದಸ್ಯರುಗಳು ಮತ್ತು ಅಧಿಕಾರಿಗಳು ಸೇರಿದಂತೆ ಹಲವರು ಉಪಸ್ಥಿತರಿದ್ದರು.‌

#governmentofkarnataka #siddaramaiah #bzzameerahmedkhan #KCCDCL #KarnatakaChristianCommunityDevelopmentCorporation #Minoritydepartment #Christian