ಮಂಗಳೂರಿನಲ್ಲಿ ಇಂದು ಕೇರಳದ ಶಿವಗಿರಿ ಮಠ ಹಾಗೂ ಮಂಗಳೂರು ವಿಶ್ವವಿದ್ಯಾಲಯದ ಆಶ್ರಯದಲ್ಲಿ ಶ್ರೀ ನಾರಾಯಣ ಗುರು ಅಧ್ಯಯನ ಪೀಠದ ವತಿಯಿಂದ ನಡೆದ “ಗುರು–ಗಾಂಧಿ” ಐತಿಹಾಸಿಕ ಸಂವಾದ ಶತಮಾನೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಿದೆ.
ಸಮಾನತೆಯ ಹರಿಕಾರರಾದ ಬ್ರಹ್ಮಶ್ರೀ ನಾರಾಯಣ ಗುರುಗಳ ಒಬ್ಬ ಅನುಯಾಯಿಯಾಗಿ, ನಾನೂ ಈ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದೇನೆ. ಶೋಷಿತರ ಧ್ವನಿಯಾಗಿ ಸಮಾಜದಲ್ಲಿ ಅಸಮಾನತೆಯ ವಿರುದ್ಧ ಹೋರಾಟ ನಡೆಸಿದ ನಾರಾಯಣ ಗುರುಗಳ “ಒಂದೇ ಜಾತಿ, ಒಂದೇ ಮತ, ಒಂದೇ ದೇವರು” ಎಂಬ ತತ್ತ್ವವು ಎಲ್ಲರನ್ನು ಸಮಾನವಾಗಿ ಕಾಣುವ ಮಾನವೀಯ ಸಂದೇಶವನ್ನು ಸಾರುತ್ತದೆ. ಜಾತಿ, ಮತ ಮತ್ತು ಧರ್ಮದ ತಾರತಮ್ಯಗಳನ್ನು ನಿವಾರಿಸಿ ಸಮಾಜದಲ್ಲಿ ಸಮಾನತೆ ಮತ್ತು ಮಾನವೀಯತೆಯನ್ನು ಬೋಧಿಸಿದ ಗುರುಗಳ ಸಿದ್ಧಾಂತಗಳು ಕೇವಲ ಕರಾವಳಿ ಭಾಗಕ್ಕೆ ಮಾತ್ರ ಸೀಮಿತವಾಗಬಾರದು.

ಹಾಗೆಯೇ ಬುದ್ಧ, ಬಸವ, ಅಂಬೇಡ್ಕರ್ ಮತ್ತು ನಾರಾಯಣ ಗುರುಗಳಂತಹ ಮಹಾನ್ ಪುರುಷರ ತತ್ತ್ವಗಳು ಕಾಶ್ಮೀರದಿಂದ ಕನ್ಯಾಕುಮಾರಿಯವರೆಗೆ ಹರಡಬೇಕೆಂಬ ಆಶಯವನ್ನು ಸಮಾವೇಶದ ವೇದಿಕೆಯಲ್ಲಿ ನಾನು ವ್ಯಕ್ತಪಡಿಸಿದೆ.
ಶ್ರೀ ಗುರುವಿನ ಮಹಾಸಮಾಧಿ ಶತಾಬ್ದಿ, ಸರ್ವಮತ ಸಮ್ಮೇಳನ ಶತಮಾನೋತ್ಸವ, ಯತಿ ಪೂಜೆ ಸೇರಿದಂತೆ ವಿಶೇಷ ಕಾರ್ಯಕ್ರಮಗಳಿಗೆ ಶಿವಗಿರಿ ವರ್ಕಳ ಮಠದ ಬ್ರಹ್ಮಶ್ರೀ ಸಚ್ಚಿದಾನಂದ ಸ್ವಾಮಿಜಿಗಳು ಸಾನಿಧ್ಯ ವಹಿಸಿದ್ದರು. ಹಿರಿಯ ನಾಯಕರಾದ ಜನಾರ್ಧನ ಪೂಜಾರಿ ಅವರು ಭಾಗವಹಿಸುವ ಮೂಲಕ ಕಾರ್ಯಕ್ರಮಕ್ಕೆ ಮತ್ತಷ್ಟು ಮೆರಗು ನೀಡಿದರು.
ಈ ಸಂದರ್ಭದಲ್ಲಿ ಮಾನ್ಯ ಮುಖ್ಯಮಂತ್ರಿ ಶ್ರೀ ಸಿದ್ಧರಾಮಯ್ಯ, ಶ್ರೀ ಜನಾರ್ದನ ಪೂಜಾರಿ, ಶ್ರೀ ಕೆ.ಸಿ. ವೇಣುಗೋಪಾಲ, ಕಾರ್ಯಕ್ರಮದ ಉಸ್ತುವಾರಿ ಹಾಗೂ ಹಿರಿಯ ನಾಯಕರು ಶ್ರೀ ಬಿ.ಕೆ. ಹರಿಪ್ರಸಾದ್, ವಿಧಾನಸಭಾಧ್ಯಕ್ಷ ಶ್ರೀ ಯು.ಟಿ ಖಾದರ್,ಸಚಿವರಾದ
ಡಾ. ಜಿ. ಪರಮೇಶ್ವರ್, ಶ್ರೀ ಬಿ.ಝೆಡ್. ಜಮೀರ್ ಅಹ್ಮದ್ ಖಾನ್, ಶ್ರೀ ದಿನೇಶ್ ಗುಂಡೂರಾವ್, ಶ್ರೀಮತಿ ಲಕ್ಷ್ಮಿ ಹೆಬ್ಬಾಳ್ಕರ್, ಮಂಗಳೂರು ವಿಶ್ವವಿದ್ಯಾಲಯದ ಕುಲಪತಿಗಳು, ವಿವಿಧ ಮಠಗಳ ಸ್ವಾಮೀಜಿಗಳು, ಜನಪ್ರತಿನಿಧಿಗಳು ಹಾಗೂ ಅಪಾರ ಸಂಖ್ಯೆಯ ಭಕ್ತರು ಮತ್ತು ನಾಗರಿಕರು ಭಾಗವಹಿಸಿದ್ದರು.
By sathish jarakiholi, Karnataka minister
#Guru_Gandhi #manglore #narayanaguru #MahatmaGandhi












