ಇಂದು ಬೆಳಗಾವಿ ನಗರದಲ್ಲಿರುವ ಜಿಲ್ಲಾಧಿಕಾರಿ ಕಚೇರಿಯಲ್ಲಿ ಎಲ್ಲಾ ತಾಲೂಕು ಅಧಿಕಾರಿಗಳೊಂದಿಗೆ ಸಭೆ ನಡೆಸಿ, ಜಿಲ್ಲೆಯ ಕುಡಿಯುವ ನೀರಿನ ಪರಿಸ್ಥಿತಿ ಹಾಗೂ ವಿವಿಧ ಆಡಳಿತಾತ್ಮಕ ವಿಷಯಗಳ ಕುರಿತು ಚರ್ಚಿಸಲಾಯಿತು.

 

ಸಭೆಯಲ್ಲಿ ಬೆಳಗಾವಿ ಜಿಲ್ಲೆಯಲ್ಲಿ ಸದ್ಯಕ್ಕೆ ಎಲ್ಲಿಯೂ ಕುಡಿಯುವ ನೀರಿನ ಸಮಸ್ಯೆ ಇಲ್ಲವೆಂದು ಅಧಿಕಾರಿಗಳು ಮಾಹಿತಿ ನೀಡಿದರು. ಆದರೆ ಯಾವುದಾದರೂ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ನೀರಿನ ಕೊರತೆ ಉಂಟಾದಲ್ಲಿ, ತಕ್ಷಣ ಟ್ಯಾಂಕರ್‌ಗಳ ಮೂಲಕ ನೀರು ಪೂರೈಸುವಂತೆ ಸೂಚನೆ ನೀಡಲಾಯಿತು. ಟ್ಯಾಂಕರ್‌ಗಳಿಲ್ಲದ ಗ್ರಾಮ ಪಂಚಾಯಿತಿಗಳು ಅವುಗಳನ್ನು ಖರೀದಿಸುವಂತೆ ತಿಳಿಸಲಾಯಿತು. ಏಪ್ರಿಲ್ ನಂತರ ನೀರಿನ ಕೊರತೆ ಉಂಟಾಗುವ ಸಾಧ್ಯತೆ ಇರುವುದರಿಂದ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲು ಸೂಚಿಸಲಾಗಿದೆ.

 

ಹಿಪ್ಪರಗಿ ಬ್ಯಾರೇಜ್‌ನ 22ನೇ ಕ್ರಸ್ಟ್ ಗೇಟ್ ಮುರಿದು ಸುಮಾರು 2–3 ಟಿಎಂಸಿ ನೀರು ನಷ್ಟವಾಗಿರುವ ಹಿನ್ನೆಲೆ, ಮಹಾರಾಷ್ಟ್ರ ಸರ್ಕಾರದಿಂದ ಸುಮಾರು 2 ಟಿಎಂಸಿ ನೀರು ಬಿಡುಗಡೆ ಮಾಡುವಂತೆ ಮನವಿ ಮಾಡುವ ಕುರಿತು ಚಿಂತನೆ ನಡೆದಿದೆ.

 

ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ನಡೆಯುತ್ತಿರುವ ನೂತನ ಜಿಲ್ಲಾಡಳಿತ ಭವನ ನಿರ್ಮಾಣ ಕಾಮಗಾರಿಗಳನ್ನು ಪರಿಶೀಲಿಸಿ, ಅವುಗಳನ್ನು ಶೀಘ್ರ ಪೂರ್ಣಗೊಳಿಸಲು ಸೂಚಿಸಲಾಯಿತು.

 

ಈ ವೇಳೆ ಜಿಲ್ಲಾಧಿಕಾರಿ ಮುಹಮ್ಮದ್ ರೋಷನ್, ಜಿಪಂ ಸಿಇಓ ರಾಹುಲ್ ಸಿಂಧೆ, ಪೊಲೀಸ್ ಆಯುಕ್ತ ಭೂಷಣ್ ಬೋರಸೆ ಸೇರಿದಂತೆ ಅಧಿಕಾರಿಗಳು ಉಪಸ್ಥಿತರಿದ್ದರು.

 

#Belagavi #SatishJarkiholi