- *ಹಝ್ರತ್ ಮಹಿಳಾ ಪದವಿ ಪೂರ್ವ ಕಾಲೇಜಿಗೆ ಶೇಕಡಾ 100 ಫಲಿತಾಂಶ*
ಉಳ್ಳಾಲ: 2025-26ನೇ ಸಾಲಿನ ದ್ವಿತೀಯ ಪಿಯುಸಿ ಫಲಿತಾಂಶದಲ್ಲಿ ಹಝ್ರತ್ ಸೈಯದ್ ಮದನಿ ಮಹಿಳಾ ಪದವಿ ಪೂರ್ವ ಕಾಲೇಜು, ಉಳ್ಳಾಲ ಶೇಕಡಾ 100 ಫಲಿತಾಂಶ ಸಾಧಿಸಿ ಶ್ಲಾಘನೀಯ ಸಾಧನೆ ಮೆರೆದಿದೆ.
ಕಾಲೇಜಿನ ವಾಣಿಜ್ಯ ವಿಭಾಗದ ನಫೀಸತುಲ್ ಮಿಸ್ರಿಯ್ಯಾ ಅವರು 577 ಅಂಕಗಳು (96%) ಪಡೆದು ಅಗ್ರ ಅಂಕಗಳಿಸಿದ ವಿದ್ಯಾರ್ಥಿನಿಯಾಗಿ ಹೊರಹೊಮ್ಮಿದ್ದಾರೆ.
ಒಟ್ಟು 62 ಮಂದಿ ವಿದ್ಯಾರ್ಥಿನಿಯರು ಪರೀಕ್ಷೆಗೆ ಹಾಜರಾಗಿದ್ದು, ಇವರಲ್ಲಿ 22 ಮಂದಿ ವಿಶಿಷ್ಟ ಶ್ರೇಣಿಯಲ್ಲಿ, 33 ಮಂದಿ ಪ್ರಥಮ ಶ್ರೇಣಿಯಲ್ಲಿ ಹಾಗೂ 7 ಮಂದಿ ದ್ವಿತೀಯ ದರ್ಜೆಯಲ್ಲಿ ಉತ್ತೀರ್ಣರಾಗಿದ್ದಾರೆ. ಈ ಮೂಲಕ ಕಾಲೇಜು ಶೇಕಡಾ 100 ಫಲಿತಾಂಶ ದಾಖಲಿಸಿ ಶಿಕ್ಷಣ ಕ್ಷೇತ್ರದಲ್ಲಿ ತನ್ನ ಗುಣಮಟ್ಟವನ್ನು ಮತ್ತೊಮ್ಮೆ ಸಾಬೀತುಪಡಿಸಿದೆ.
ಸಂಸ್ಥೆಯ ಈ ಸಾಧನೆಗೆ ಆಡಳಿತ ಮಂಡಳಿ, ಪ್ರಾಂಶುಪಾಲರು, ಉಪನ್ಯಾಸಕರು ಹಾಗೂ ಪೋಷಕರು ಹರ್ಷ ವ್ಯಕ್ತಪಡಿಸಿದ್ದಾರೆ.












