ಇಂದು ಬೆಂಗಳೂರಿನಲ್ಲಿ ಸುರಿದ ಭಾರೀ ಮಳೆಗೆ ಬೌರಿಂಗ್ ಆಸ್ಪತ್ರೆ ಬಳಿ ಸಂಭವಿಸಿದ ದುರ್ಘಟನೆಯಲ್ಲಿ ಏಳು ಜನ ಸಾವನ್ನಪ್ಪಿದ್ದು, ನನ್ನ ಮನಸ್ಸಿಗೆ ಅಪಾರ ನೋವು ತಂದಿದೆ. ಆಸ್ಪತ್ರೆಗೆ ಭೇಟಿ ನೀಡಿ ಮೃತರ ಕುಟುಂಬಸ್ಥರಿಗೆ ಸಾಂತ್ವನ ಹೇಳಿ, ಚಿಕಿತ್ಸೆ ಪಡೆಯುತ್ತಿರುವ ಗಾಯಾಳುಗಳ ಆರೋಗ್ಯ ವಿಚಾರಿಸಿ, ಅಗತ್ಯವಿರುವ ಎಲ್ಲಾ ಸಹಾಯವನ್ನು ಮಾಡುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದೆ. ನಂತರ ಘಟನಾಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದೆ.

ಈ ಸಂಕಷ್ಟದ ಸಮಯದಲ್ಲಿ ಸರ್ಕಾರವು ಮೃತರ ಕುಟುಂಬದವರ ಬೆನ್ನಿಗೆ ನಿಂತಿದ್ದು, ತಲಾ ₹5 ಲಕ್ಷ ಪರಿಹಾರ ಘೋಷಿಸಿದೆ. ಮೃತರ ಆತ್ಮಕ್ಕೆ ಶಾಂತಿ ಸಿಗಲಿ ಹಾಗೂ ಅವರ ಕುಟುಂಬದವರಿಗೆ ಈ ದುಃಖವನ್ನು ಸಹಿಸುವ ಶಕ್ತಿಯನ್ನು ಆ ಭಗವಂತ ನೀಡಲಿ ಎಂದು ಪ್ರಾರ್ಥಿಸುತ್ತೇನೆ. ಗಾಯಾಳುಗಳು ಆದಷ್ಟು ಶೀಘ್ರವಾಗಿ ಗುಣಮುಖರಾಗಲಿ ಎಂದು ಹಾರೈಸುತ್ತೇನೆ.

ಡಿ ಕೆ ಶಿವ ಕುಮಾರ್, ಉಪ ಮುಖ್ಯಮಂತ್ರಿ, ಕರ್ನಾಟಕ ಸರಕಾರ

ಭಾರಿ ಮಳೆಯ ಆರ್ಭಟದಿಂದ ಬೆಂಗಳೂರು ಶಿವಾಜಿನಗರದ ಬೌರಿಂಗ್ ಆಸ್ಪತ್ರೆ ಗೋಡೆ ಕುಸಿದು ಇಬ್ಬರು ಮಕ್ಕಳು ಸೇರಿದಂತೆ ಏಳು ಮಂದಿ ಬೀದಿ ವ್ಯಾಪಾರಿಗಳು ಮೃತಪಟ್ಟಿರುವ ದಾರುಣ ಘಟನೆ ಹೃದಯವಿದ್ರಾವಕವಾಗಿದೆ. ಮೃತರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಪ್ರಾರ್ಥಿಸುತ್ತಾ, ಅವರ ಕುಟುಂಬಸ್ಥರ ದುಃಖದಲ್ಲಿ ನಾನೂ ಭಾಗಿಯಾಗಿದ್ದೇನೆ ಎಂದು ತೀವ್ರ ಸಂತಾಪ ವ್ಯಕ್ತಪಡಿಸುತ್ತೇನೆ. ಗಾಯಾಳುಗಳು ಶೀಘ್ರ ಗುಣಮುಖರಾಗಲಿ ಎಂದು ಹಾರೈಸುತ್ತೇನೆ.

B Z Zamir Ahmed Khan, Karnataka Minister For Housing, Wakf And Minority Affairs

#bengaluru #bowringhospital

#tragedy