02:50 am Friday, June 21, 2019
 • ಆರೋಗ್ಯ ಸೂಚ್ಯಂಕದಲ್ಲಿ ಉಡುಪಿ ಜಿಲ್ಲೆ ರಾಜ್ಯದಲ್ಲೇ ಪ್ರಥಮ- ಸಚಿವ ಪ್ರಮೋದ್ ಮಧ್ವರಾಜ್

  By admin - Thu Jun 08, 10:12 am

  ಆರೋಗ್ಯ ಸೂಚ್ಯಂಕದಲ್ಲಿ ಉಡುಪಿ ಜಿಲ್ಲೆ ರಾಜ್ಯದಲ್ಲೇ ಪ್ರಥಮ- ಸಚಿವ ಪ್ರಮೋದ್ ಮಧ್ವರಾಜ್

  pramod

   

   

   

   

   

  ಆರೋಗ್ಯ ಸೂಚ್ಯಂಕದಲ್ಲಿ ಜಿಲ್ಲೆ ರಾಜ್ಯದಲ್ಲೇ ಪ್ರಥಮ- ಪ್ರಮೋದ್
  ಆರೋಗ್ಯ ಮತ್ತು ಶಿಕ್ಷಣ ಸೂಚ್ಯಂಕದಲ್ಲಿ ಉಡುಪಿ ಜಿಲ್ಲೆಯು ಇಡೀ ರಾಜ್ಯದಲ್ಲೇ ಪ್ರಥಮ ಸ್ಥಾನದಲ್ಲಿದೆ ಎಂದು ರಾಜ್ಯ ಮೀನುಗಾರಿಕೆ, ಯುವಜನಸೇವೆ ಮತ್ತು ಕ್ರೀಡೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಪ್ರಮೋದ್ ಮಧ್ವರಾಜ್ ತಿಳಿಸಿದ್ದಾರೆ.
  ಅವರು ಗುರುವಾರ , ಜಿಲ್ಲಾ ಪಂಚಾಯತ್ ಉಡುಪಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಉಡುಪಿ, ಕರ್ನಾಟಕ ಆರೋಗ್ಯ ವ್ಯವಸ್ಥೆ ಅಭಿವೃದ್ಧಿ ಮತ್ತು ಸುಧಾರಣಾ ಯೋಜನೆ ಇವರ ವತಿಯಿಂದ ಸಮುದಾಯ ಆರೋಗ್ಯ ಕೇಂದ್ರ, ಹೆಬ್ರಿ ಇದರ ನೂತನ ಕಟ್ಟಡದ ಉದ್ಘಾಟನಾ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದರು.
  ಆರೋಗ್ಯ ಸಮಸ್ಯೆಗಳಿಗೆ ಸಂಬಂದಪಟ್ಟಂತೆ ಸರಕಾರಿ ಆಸ್ಪತ್ರೆಗಳಿಗೆ ಆರ್ಥಿಕವಾಗಿ ಹಿಂದುಳಿದ ಜನತೆ ಆಗಮಿಸುತ್ತಿದ್ದು, ಅಗಮಿಸುವ ಜನತೆಗೆ ಉತ್ತಮ ರೀತಿಯಲ್ಲಿ ಸೇವೆಯನ್ನು ನೀಡುವಂತೆ ಸೂಚಿಸಿದ ಸಚಿವರು,. ರೂ.3.5 ಕೋಟಿ ವೆಚ್ಚದಲ್ಲಿ ನಿರ್ಮಾಣವಾಗಿರುವ ಈ ಸಮುದಾಯ ಕೇಂದ್ರದಲ್ಲಿ 45 ಸಿಬ್ಬಂದಿಗಳು ಕಾರ್ಯ ನಿರ್ವಹಿಸಬೇಕಾಗಿದ್ದು, ಪ್ರಸ್ತುತ 24 ಮಂದಿ ಮಾತ್ರ ಕಾರ್ಯ ನಿರ್ವಹಿಸುತ್ತಿದ್ದು, 21 ಹುದ್ದೆಗಳು ಖಾಲಿ ಇವೆ, ಈ ಹುದ್ದೆಗಳನ್ನು ಶೀಘ್ರದಲ್ಲಿ ಭರ್ತಿ ಮಾಡುವ ಕುರಿತು ಕ್ರಮ ಕೈಗೊಳ್ಳಲಾಗುವುದು ಎಂದು ಸಚಿವರು ಹೇಳಿದರು.
  ಜಿಲ್ಲಾ ಪಂಚಾಯತ್ ಅಧ್ಯಕ್ಷ ದಿನಕರ ಬಾಬು ಮಾತನಾಡಿ , ಈ ಆಸ್ಪತ್ರೆಯಿಂದ ರೋಗಿಗಳಿಗೆ ಉತ್ತಮ ಆರೋಗ್ಯ ಸೇವೆ ದೊರೆಯಲಿ ಎಂದು ಹೇಳಿದರು.
  ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ವಿಧಾನಸಭೆಯ ವಿರೋಧ ಪಕ್ಷದ ಮುಖ್ಯ ಸಚೇತಕರು ಹಾಗೂ ಕಾರ್ಕಳ ಶಾಸಕ ವಿ.ಸುನೀಲ್ ಕುಮಾರ್ ಮಾತನಾಡಿ, ಕಾರ್ಕಳದ ತಾಲೂಕು ಆಸ್ಪತ್ರೆಯನ್ನು ಅಭಿವೃದ್ಧಿಗೊಳಿಸಲು 6 ಕೋಟಿ ರೂ ಗಳ ವಿಶೇಷ ಅನುದಾನ ಮಂಜೂರು ಆಗಿದೆ. ಹೆಬ್ರಿಯನ್ನು ತಾಲೂಕು ಕೇಂದ್ರವನ್ನಾಗಿ ಮಾಡುವ ಉದ್ದೇಶದಿಂದ ಎಲ್ಲಾ ರೀತಿಯಲ್ಲಿ ಅಭಿವೃದ್ದಿಗೊಳಿಸಲಾಗುತ್ತಿದೆ, ಹೆಬ್ರಿಯಲ್ಲಿ ಈ ಹಿಂದೆ ಇದ್ದ ಆಸ್ಪತ್ರೆಯ ಜಾಗವನ್ನು ವ್ಯವಸ್ಥಿತ ರೀತಿಯ ಬಸ್ ನಿಲ್ದಾಣವನ್ನಾಗಿ ಮಾಡಲು ಚಿಂತನೆ ನಡೆಸಲಾಗುವುದು ಎಂದು ಹೇಳಿದರು.
  ಕಾರ್ಯಕ್ರಮದಲ್ಲಿ ಜಿ.ಪಂ. ನ ಆರೋಗ್ಯ ಮತ್ತು ಶಿಕ್ಷಣ ಸ್ಥಾಯಿ ಸಮಿತಿಯ ಅಧ್ಯಕ್ಷ ಉದಯ ಎಸ್ ಕೋಟ್ಯಾನ್,ಕಾರ್ಕಳ ತಾ.ಪಂ. ಅಧ್ಯಕ್ಷೆ ಮಾಲಿನಿ ಜೆ ಶೆಟ್ಟಿ, ಉಪಾಧ್ಯಕ್ಷ ಗೋಪಾಲ ಮೂಲ್ಯ, ಹೆಬ್ರಿ ಗ್ರಾ. ಪಂ. ಅಧ್ಯಕ್ಷ ಸುಧಾಕರ ಹೆಗ್ಡೆ, ಜಿ.ಪಂ. ಸದಸ್ಯ ಜ್ಯೋತಿ ಹರೀಶ್, ಕಾರ್ಕಳ ತಾ.ಪಂ. ಸದಸ್ಯ ಚಂದ್ರಶೇಖರ ಶೆಟ್ಟಿ, ಅಮೃತ್ ಕುಮಾರ್ ಶೆಟ್ಟಿ, ಲಕ್ಷ್ಮಿ ದಯಾನಂದ, ರಮೇಶ್ ಪೂಜಾರಿ, ಚಾರ ಗ್ರಾ.ಪಂ. ಸದಸ್ಯ ಸಂದೀಪ್, ನಾಡ್ಪಾಲು ಗ್ರಾ.ಪಂ. ಅಧ್ಯಕ್ಷ ಜಲಜಾ ಪೂಜಾರ್ತಿ,ಮುದ್ರಾಡಿ ಗ್ರಾ.ಪಂ. ಅಧ್ಯಕ್ಷ ಶಶಿಕಲಾ ಡಿ.ಪೂಜಾರಿ, ಶಿವಪುರ ಗ್ರಾ.ಪಂ. ಅಧ್ಯಕ್ಷ ಸುಗಂಧಿ ನಾಯ್ಕ್ , ಜಿ.ಪಂ. ಉಪ ಕಾರ್ಯದರ್ಶಿ ನಾಗೇಶ್ ರಾಯ್ಕರ್, ಇಂಜಿನಿಯರ್ ಹೆಬ್ಬಾರ್ ಮತ್ತಿತರರು ಉಪಸ್ಥಿತರಿದ್ದರು.
  ಹೆಬ್ರಿ ಸಮುದಾಯ ಆರೋಗ್ಯ ಕೇಂದ್ರದ ಡಾ. ನರಸಿಂಹ ನಾಯಕ್ ಪ್ರಾಸ್ತಾವಿಕವಾಗಿ ಮಾತನಾಡಿದರು. ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ರೋಹಿಣಿ ಸ್ವಾಗತಿಸಿದರು. ಕಾರ್ಕಳ ತಾಲೂಕು ಆರೋಗ್ಯಾಧಿಕಾರಿ ಡಾ. ಕೃಷ್ಣಾನಂದ ವಂದಿಸಿದರು.

  Leave a Reply

  Comments are closed on this post.