07:33 pm Tuesday, June 25, 2019
  • ಹಿಂದುಳಿದ ವರ್ಗಗಳ ಆಯೋಗದಿಂದ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ

    By admin - Wed Jun 14, 3:27 pm

    ರಾಜ್ಯ ಹಿಂದುಳಿದ ವರ್ಗಗಳ ಆಯೋಗದಿಂದ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆΦ
    ರಾಜ್ಯದಲ್ಲಿ ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದಿಂದ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯನ್ನು ದಿನಾಂಕ: 11-04-2015 ರಿಂದ ಪ್ರಾರಂಭಿಸಿ ದಿನಾಂಕ: 30-05-2015 ರಂದು ಪೂರ್ಣಗೊಳಿಸಲಾಗಿದೆ ಎಂದು ಸಮಾಜ ಕಲ್ಯಾಣ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಸಚಿವ ಹೆಚ್. ಆಂಜನೇಯ ಅವರು ತಿಳಿಸಿದರು. ಇಂದು ವಿಧಾನ ಪರಿಷತ್ತಿನಲ್ಲಿ ಪ್ರಶ್ನೋತ್ತರ ವೇಳೆಯಲ್ಲಿ ಮಾತನಾಡುತ್ತಾ ಸಮೀಕ್ಷೆಯ ಗಣತಿ ಕಾರ್ಯವನ್ನು ನಿರ್ವಹಿಸಲು ಶಿಕ್ಷಣ ಇಲಾಖೆಯ ಶಿಕ್ಷಕರನ್ನು ಗಣತಿದಾರರನ್ನಾಗಿ ನೇಮಕ ಮಾಡಿಕೊಳ್ಳಲಾಗಿತ್ತು. ಸಮೀಕ್ಷಾ ಕಾರ್ಯ ಉಸ್ತುವಾರಿ ಮತ್ತು ಮೇಲ್ವಿಚಾರಣೆ ಮಾಡಲು ಕಂದಾಯ, ಗ್ರಾಮೀಣಾಭಿವೃಧ್ಧಿ ಮತ್ತು ಪಂಚಾಯತ್ ರಾಜ್, ಪೌರಾಡಳಿತ, ನಗರಾಭಿವೃದ್ಧಿ, ಆರ್ಥಿಕ ಮತ್ತು ಸಾಂಖ್ಯಿಕ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಅಧಿಕಾರಿಗಳ ಸೇವೆಯನ್ನು ಬಳಸಿಕೊಳ್ಳಲಾಗಿದೆ ಎಂದು ಸದನಕ್ಕೆ ತಿಳಿಸಿದರು. ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯ ಅಂಕಿ-ಅಂಶಗಳ ಕ್ರೋಢಿಕರಣವು ಪೂರ್ಣಗೊಂಡಿರುತ್ತದೆ. ವರದಿ ಸಿದ್ಧಪಡಿಸುವ ಕಾರ್ಯ ಅಂತಿಮ ಹಂತದಲ್ಲಿದ್ದು ವರದಿಯನ್ನು ಆಯೋಗವು ಸರ್ಕಾರಕ್ಕೆ ಸಲ್ಲಿಸಿದ ನಂತರ ಜಾತಿ/ಉಪ ಜಾತಿಗಳ ಪೂರ್ಣ ಮಾಹಿತಿಯು ಲಭ್ಯವಾಗಲಿದೆ ಎಂದು ಸದಸ್ಯರಿಗೆ ತಿಳಿಸಿದರು. ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಗಾಗಿ ಇಲ್ಲಿಯವರೆಗೆ 148.74 ಕೋಟಿ ರೂ. ಗಳನ್ನು ವೆಚ್ಚ ಮಾಡಲಾಗಿದೆ ಎಂದರು.
    (Release ID :745)

    Leave a Reply

    Comments are closed on this post.