05:55 am Wednesday, July 24, 2019
 • ಜಾಲತಾಣಗಳಲ್ಲಿ ವದಂತಿ ಹಬ್ಬಿಸುವವರ ವಿರುದ್ಧ ಕಠಿಣ ಕ್ರಮ – ಸಚಿವ ರಾಮಲಿಂಗಾ ರೆಡ್ಡಿ

  By admin - Tue Dec 12, 7:55 pm

  • Comments Off on ಜಾಲತಾಣಗಳಲ್ಲಿ ವದಂತಿ ಹಬ್ಬಿಸುವವರ ವಿರುದ್ಧ ಕಠಿಣ ಕ್ರಮ – ಸಚಿವ ರಾಮಲಿಂಗಾ ರೆಡ್ಡಿ
  • 0 views
  ಸಾಮಾಜಿಕ ಜಾಲತಾಣಗಳಲ್ಲಿ ವದಂತಿ ಹಬ್ಬಿಸುವವರ ವಿರುದ್ಧ ಕಠಿಣ ಕ್ರಮ – ಗೃಹ ಸಚಿವ ರಾಮಲಿಂಗಾ ರೆಡ್ಡಿ ಎಚ್ಚರಿಕೆ
  ಸಾಮಾಜಿಕ ಜಾಲತಾಣಗಳಲ್ಲಿ ವದಂತಿ ಹಬ್ಬಿಸುವವರು ಯಾರೇ ಆದರೂ ಅಂತಹವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಗೃಹ ಸಚಿವ ರಾಮಲಿಂಗಾ ರೆಡ್ಡಿ ಅವರು ತಿಳಿಸಿದರು. ವಿಕಾಸಸೌಧದಲ್ಲಿ ಇಂದು ತಮ್ಮ ಕಚೇರಿ ಸಭಾಂಗಣದಲ್ಲಿ ಕರೆಯಲಾಗಿದ್ದ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ಹೊನ್ನಾವರ ಗಲಭೆಗೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣಗಳಲ್ಲಿ ಊಹಪೋಹದ ವದಂತಿಗಳನ್ನು ಹಬ್ಬಿಸುತ್ತಿದ್ದು ಇದಕ್ಕೆ ಕಾರಣರಾದವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು. ಹೊನ್ನಾವರ ಪ್ರಕರಣದ ಮರಣೋತ್ತರ ವರದಿ ಕೆಲದಿನಗಳಲ್ಲಿ ಹೊರಬರಲಿದ್ದು, ಯಾವುದೇ ಮರಣೋತ್ತರ ವರದಿ ಪ್ರಕಟಗೊಳ್ಳಲು ಕನಿಷ್ಠ 15 ದಿನಗಳು ಬೇಕಾಗುತ್ತದೆ ಎಂದು ಸುದ್ದಿಗಾರರ ಪ್ರಶ್ನೆಯೊಂದಕ್ಕೆ ಅವರು ಉತ್ತರಿಸಿದರು. ಪ್ರತಿಭಟನೆ ಎಲ್ಲರ ಹಕ್ಕು ಆದರೆ, ಶಾಂತಿಯುತ ವಾತಾವರಣ ಕದಡುವ ಪ್ರಯತ್ನ ಯಾರೂ ಮಾಡಬಾರದು, ಕಾನೂನು ಕೈಗೆತ್ತಿಕೊಳ್ಳಲು ಯಾರಿಗೂ ಬಿಡುವುದಿಲ್ಲ ಎಂದು ಅವರು ತಿಳಿಸಿದರು.
  • Comments Off on ಜಾಲತಾಣಗಳಲ್ಲಿ ವದಂತಿ ಹಬ್ಬಿಸುವವರ ವಿರುದ್ಧ ಕಠಿಣ ಕ್ರಮ – ಸಚಿವ ರಾಮಲಿಂಗಾ ರೆಡ್ಡಿ
  • 1 Star2 Stars3 Stars4 Stars5 Stars (No Ratings Yet)
   Loading...Loading...
  • 0 views

  Leave a Reply

  Comments are closed on this post.