08:09 pm Tuesday, June 25, 2019
  • ರಾಜ್ಯ ವಿಧಾನಸಭಾ ಚುನಾವಣೆ ಮೇ.12

    By admin - Tue Mar 27, 6:49 am

    • Comments Off on ರಾಜ್ಯ ವಿಧಾನಸಭಾ ಚುನಾವಣೆ ಮೇ.12
    • 0 views

    ನವದೆಹಲಿ: ರಾಜ್ಯ ವಿಧಾನಸಭಾ ಚುನಾವಣೆ ಮತದಾನ ದಿನಾಂಕ(ಮೇ.12) ಪ್ರಕಟವಾಗಿರುವ ಹಿನ್ನೆಲೆಯಲ್ಲಿ ಕರ್ನಾಟಕದಲ್ಲಿ ಮಂಗಳವಾರದಿಂದ ನೀತಿ ಸಂಹಿತೆ ಜಾರಿಯಾಗಿದೆ. ಅಭ್ಯರ್ಥಿಗಳ ನಾಮಪತ್ರ ಸಲ್ಲಿಕೆಗೆ ಏ.24 ಕೊನೇ ದಿನವಾಗಿದೆ.

    2018ರ ಕರ್ನಾಟಕ ವಿಧಾನಸಭಾ ಚುನಾವಣೆ ನಾಮಪತ್ರ ಸಲ್ಲಿಕೆ ಸಂಬಂಧ ಚುನಾವಣೆ ಆಯೋಗ ಏ.17ರಂದು ಅಧಿಸೂಚನೆ ಹೊರಡಿಸಲಿದೆ. ಅಭ್ಯರ್ಥಿಗಳ ನಾಮಪತ್ರ ಸಲ್ಲಿಕೆಗೆ ಏ.24 ಕೊನೆಯ ದಿನವಾಗಿದೆ. ಏ.25ರಂದು ನಾಮಪತ್ರ ಪರಿಶೀಲನೆ ನಡೆಯಲಿದ್ದು, ನಾಮಪತ್ರ ಹಿಂಪಡೆಯಲು ಏ.27ರ ವರೆಗೂ ಅವಕಾಶವಿದೆ.

    ಸಿಒಸಿ (ನೀತಿ ಸಂಹಿತೆ) ಇಂದಿನಿಂದಲೇ ಅನ್ವಯವಾಗಲಿದೆ. ಕಾನೂನು ಸುವ್ಯವಸ್ಥೆ ಕಾಪಾಡಲು ಕೇಂದ್ರ ಸಶಸ್ತ್ರ ಪಡೆ‌ಬಳಕೆ ಮಾಡಲಾಗುತ್ತದೆ ಎಂದು ಚುನಾವಣಾ ಆಯುಕ್ತ  ಓಂ ಪ್ರಕಾಶ್ ರಾವತ್ ಮಾಹಿತಿ ನೀಡಿದರು. ಅಭ್ಯರ್ಥಿಗೆ ಚುನಾವಣಾ ಪ್ರಚಾರ ಸೇರಿ ಮಾಡಬಹುದಾದ ಒಟ್ಟು ಖರ್ಚಿಗೆ ₹28 ಲಕ್ಷ ಮಿತಿ ನಿಗದಿ ಪಡಿಸಲಾಗಿದೆ.

    ಚುನಾವಣಾ ದಿನಾಂಕ ಸೋರಿಕೆ ಹೇಗೆ?
    ಭಾರತೀಯ ಚುನಾವಣೆ ಆಯೋಗ(ಇಸಿಐ) ಅಧಿಕೃತವಾಗಿ ಚುನಾವಣಾ ದಿನಾಂಕ ಪ್ರಕಟಿಸುವ ಮೊದಲೇ ಮತದಾನದ ದಿನದ ಮಾಹಿತಿ ಸೋರಿಕೆ ಆಗಿರುವ ಕುರಿತು ಮುಖ್ಯ ಚುನಾವಣಾ ಆಯುಕ್ತ ಓಂ ಪ್ರಕಾಶ್ ರಾವತ್ ಪ್ರಸ್ತಾಪಿಸಿದರು.

    ಈ ಬಗ್ಗೆ ಪರಿಶೀಲಿಸಿ ಕ್ರಮ‌ ಕೈಗೊಳ್ಳುವುದಾಗಿ ಹೇಳಿದರು.

    ಇವಿಎಂ ಜತೆಗೆ ವಿವಿ ಪ್ಯಾಟ್‌:
    ವಿದ್ಯುನ್ಮಾನ ಮತಯಂತ್ರಗಳ (ಇವಿಎಂ) ವಿಶ್ವಾಸಾರ್ಹತೆ ಬಗ್ಗೆ ಮತದಾರರಲ್ಲಿರುವ ಅನುಮಾನ ಹೋಗಲಾಡಿಸುವ ಉದ್ದೇಶದಿಂದ ಅವುಗಳ ಜತೆಗೆ ಮತ ಖಾತರಿ ಯಂತ್ರಗಳನ್ನು (ವಿ.ವಿ ಪ್ಯಾಟ್‌) ಬಳಸುವುದಾಗಿ ಚುನಾವಣಾ ಆಯೋಗ ಪ್ರಕಟಿಸಿದೆ. ಇವಿಎಂನಲ್ಲಿ ಅಭ್ಯರ್ಥಿ ಭಾವಚಿತ್ರ ಇರಲಿದ್ದು, ಮತದಾರರಿಗೆ ಅಭ್ಯರ್ಥಿ ಗುರುತಿಸಲು ಸಹಕಾರಿಯಾಗಲಿದೆ.

    ನವದೆಹಲಿ: ಕರ್ನಾಟಕ ವಿಧಾನಸಭಾ ಚುನಾವಣೆ 2018 ಮೇ 12ರಂದು ನಡೆಯಲಿದೆ. ಇಂದು ಬೆಳಗ್ಗೆ ಚುನಾವಣಾ ಆಯೋಗ ನಡೆಸಿದ ಸುದ್ದಿಗೋಷ್ಠಿಯಲ್ಲಿ ದಿನಾಂಕ ಪ್ರಕಟಿಸಲಾಗಿದೆ. ಮೇ ತಿಂಗಳ 15ರಂದು ಮತ ಎಣಿಕೆ ನಡೆಯಲಿದೆ.

    ಸುದ್ದಿಗೋಷ್ಠಿಯಲ್ಲಿ ದಿನಾಂಕ ಪ್ರಕಟಿಸಿದ ಮುಖ್ಯ ಚುನಾವಣಾ ಆಯುಕ್ತ ಓಂ ಪ್ರಕಾಶ್ ರಾವತ್,  ಕರ್ನಾಟಕದಲ್ಲಿ ಇಂದಿನಿಂದಲೇ ನೀತಿ ಸಂಹಿತೆ ಜಾರಿಯಾಗಲಿದೆ ಎಂದಿದ್ದಾರೆ.

    ರಾಜ್ಯದಲ್ಲಿ ಒಟ್ಟು 4.96 ಕೋಟಿ ಮತದಾರರಿದ್ದಾರೆ. ಒಂದೇ ಒಂದು ಹಂತದ ಮತದಾನ ಇಲ್ಲಿ ನಡೆಯಲಿದ್ದು, 56,000 ಮತಗಟ್ಟೆಗಳಿರಲಿವೆ. ಈ ಬಾರಿ ಇವಿಎಂ ಜತೆ ವಿವಿ ಪ್ಯಾಟ್ (ಮತ ಖಾತರಿ ಯಂತ್ರ) ಇರಲಿದೆ. ಮತಗಟ್ಟೆಗಳಲ್ಲಿ ಅಂಗವಿಕಲರಿಗೆ ವಿಶೇಷ ಸೌಲಭ್ಯವಿರಲಿದೆ.

    ಪಕ್ಷಗಳ ಚುನಾವಣಾ ವೆಚ್ಚಕ್ಕೆ ಯಾವುದೇ ಮಿತಿಯಿರುವುದಿಲ್ಲ, ಆದರೆ ಅಭ್ಯರ್ಥಿಯೊಬ್ಬರ ಚುನಾವಣಾ ವೆಚ್ಚ  ₹28 ಲಕ್ಷಕ್ಕೆ ಸೀಮಿತಗೊಳಿಸಲಾಗಿದೆ.

    ಈಗಿರುವ 224 ಸದಸ್ಯರ ಕರ್ನಾಟಕ ವಿಧಾನಸಭೆಯ ಕಾಲಾವಧಿ ಮೇ 28ರಂದು ಅಂತ್ಯಗೊಳ್ಳಲಿದೆ. ಮೇ ತಿಂಗಳು ಮುಗಿಯುವುದರೊಳಗೆ ಕರ್ನಾಟಕದಲ್ಲಿ ಚುನಾವಣಾ ಪ್ರಕ್ರಿಯೆಗಳು ಪೂರ್ತಿಗೊಳ್ಳಬೇಕಿದೆ.

    ಕಾಂಗ್ರೆಸ್ ಅಧಿಕಾರದಲ್ಲಿರುವ ಕರ್ನಾಟಕದಲ್ಲಿ ಅಧಿಕಾರದ ಗದ್ದುಗೆಯೇರಲು ಬಿಜೆಪಿ ಯತ್ನಿಸುತ್ತಿದೆ. ಬಿಎಸ್ ಯಡಿಯೂರಪ್ಪ ಅವರ ನೇತೃತ್ವದಲ್ಲಿ ಬಿಜೆಪಿ ಚುನಾವಣೆ ಎದುರಿಸಲು ಸಿದ್ಧರಾಗಿದ್ದರೆ, ಇತ್ತ ಕಾಂಗ್ರೆಸ್ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ಕಣಕ್ಕಿಳಿದಿದೆ.

    ಏನಿದು ವಿವಿ ಪ್ಯಾಟ್? 

    ಮತದಾರ ತಾನು ಆಯ್ಕೆ ಮಾಡಬೇಕಿರುವ ವ್ಯಕ್ತಿಯ ಹೆಸರಿನ ಮುಂದಿನ ಗುಂಡಿ ಒತ್ತಿದರೆ ಸಾಕು ಮತಯಂತ್ರದ ಪಕ್ಕದಲ್ಲಿಯೇ ಇಡಲಾಗುವ ಮತ ಖಾತರಿಪಡಿಸುವ ವೋಟರ್‌ ವೆರಿಫೈಡ್‌ ಪೇಪರ್‌ ಆಡಿಟ್‌ (ವಿವಿ ಪ್ಯಾಟ್) ಯಂತ್ರದಲ್ಲಿ ನಾವು ಮತ ಹಾಕಿದ ಅಭ್ಯರ್ಥಿಯ ಹೆಸರಿನಲ್ಲಿ ಪ್ರಿಂಟ್ ಆದ ಚೀಟಿ ಮತದಾನದ ಪೆಟ್ಟಿಗೆಯಲ್ಲಿ ಬೀಳುತ್ತದೆ. ಆಗ ಮತದಾರ ತಾನು ಚಲಾಯಿಸಿದ ಮತ ಸರಿಯಾಗಿದೆಯೇ ಎನ್ನುವುದನ್ನು ಖಚಿತ ಪಡಿಸಿಕೊಳ್ಳಬಹುದು.

    • Comments Off on ರಾಜ್ಯ ವಿಧಾನಸಭಾ ಚುನಾವಣೆ ಮೇ.12
    • 1 Star2 Stars3 Stars4 Stars5 Stars (No Ratings Yet)
      Loading...Loading...
    • 0 views

    Leave a Reply

    Comments are closed on this post.