07:28 pm Tuesday, June 25, 2019
 • ದಲಿತ ಸಾಹಿತಿಗಳ ಕೃತಿ ಪ್ರಕಟಣೆಗೆ ಪ್ರೋತ್ಸಾಹ ಧನ

  By admin - Sun Jun 10, 5:56 pm

  • Comments Off on ದಲಿತ ಸಾಹಿತಿಗಳ ಕೃತಿ ಪ್ರಕಟಣೆಗೆ ಪ್ರೋತ್ಸಾಹ ಧನ
  • 0 views
   
  ಪ್ರೋತ್ಸಾಹ ಧನಕ್ಕಾಗಿ ಅರ್ಜಿ ಆಹ್ವಾನ
  ಬೆಂಗಳೂರು, ಜೂನ್ 8, (ಕರ್ನಾಟಕ ವಾರ್ತೆ)
   ಕನ್ನಡ ಪುಸ್ತಕ ಪ್ರಾಧಿಕಾರವು ದಲಿತ ಸಾಹಿತಿಗಳ ಕೃತಿ ಪ್ರಕಟಣೆಗೆ ತಲಾ ರೂ 35,000/- ರೂ. ಪ್ರೋತ್ಸಾಹ ಧನ ನೀಡುವ ಯೋಜನೆ ರೂಪಿಸಿದ್ದು ಅರ್ಜಿಗಳನ್ನು ಆಹ್ವಾನಿಸಿದೆ.
  ಅರ್ಜಿದಾರರು ಕಡ್ಡಾಯವಾಗಿ ತಮ್ಮ ಆರ್.ಡಿ. ನಂಬರ್ ಇರುವ ಜಾತಿ ಪ್ರಮಾಣ ಪತ್ರದೊಂದಿಗೆ  ಂ4 ಸೈಜ್ ಹಾಳೆಯಲ್ಲಿ ಡಿ.ಟಿ.ಪ[ಇ. ಮಾಡಿದ ಕನಿಷ್ಟ 200 ಪುಟಗಳಿರುವ ಕೃತಿಯನ್ನು ಸಲ್ಲಿಸಬಹುದಾಗಿದೆ.  ಆಯ್ಕೆಗಾಗಿ ಸಲ್ಲಿಸುವ ಹಸ್ತಪ್ರತಿಯು ಸಾಹಿತ್ಯ, ಮಾನವಿಕ, ವಿಜ್ಞಾನಮ ವಿಚಾರ ಸಾಹಿತ್ಯ ಹಾಗೂ ಇತರ ಜ್ಞಾನ ಶಿಸ್ತುಗಳ ವಿಚಾರಗಳಿಗೆ ಸಂಬಂಧಿಸಿದ್ದಾಗಿದ್ದು,  ಅನುವಾದಗಳನ್ನು ಪಠ್ಯ ಪುಸ್ತಕಗಳನ್ನು ಹಾಗೂ ಬೇರಾವುದೇ ಪದವಿಗಾಗಿ ಸಿದ್ಧಪಡಿಸಿರುವ ಪ್ರಬಂಧಗಳನ್ನು ಪರಿಗಣಿಸಲಾಗುವುದಿಲ್ಲ.
  ಕೃತಿಯ ಪಠ್ಯದಲ್ಲಿ ಯಾವುದೇ ಧರ್ಮ, ದೇವರು, ಜಾತಿ, ಕೋಮು, ವೃತ್ತಿ, ಸಮುದಾಯ, ಭಾಷೆ, ಆಚರಣೆ, ಪದ್ಧತಿ, ಇತ್ಯಾದಿ ಸಂಗತಿಗಳಿಗೆ ಸಂಬಂಧಿಸಿದಂತೆ ಹಾಗೂ ರಾಷ್ಟ್ರೀಯ ನಾಯಕರುಗಳ ಕುರಿತಂತೆ ನೇರವಾಗಿಯೇ ಆಗಲಿ ಅಥವಾ ಪರೋಕ್ಷವಾಗಿಯೇ ಆಗಲಿ ಮನನೋಯಿಸುವಂತಹ ವಿಷಯವಾಗಲಿ ಇರಬಾರದು.  ಅಲ್ಲದೆ, ರಾಷ್ಟ್ರೀಯ ಭಾವೈಕ್ಯತೆಗೆ ಧಕ್ಕೆ ತರುವಂತಹ ವಿಷಯ/ಸಂಗತಿಗಳು ಪ್ರಸ್ತಾಪವಾಗಿರಬಾರದು. ಪ್ರಾಧಿಕಾರಕ್ಕೆ ಸಲ್ಲಿಸಲ್ಪಡುವ ಅರ್ಜಿಗಳನ್ನು/ಹಸ್ತಪ್ರತಿಗಳನ್ನು ಹಿಂದಿರುಗಿಸಲಾಗುವುದಿಲ್ಲ.  ಒಬ್ಬ ಲೇಖಕರ ಒಂದು ಪ್ರತಿಯನ್ನು ಕೂಡ ಅರ್ಜಿ ಸಲ್ಲಿಸಲು ಅವಕಾಶವಿದೆ. ದಿನಾಂಕ: 30-06-2018 ರ ಒಳಗಾಗಿ ಆಡಳಿತಾಧಿಕಾರಿಗಳು, ಕನ್ನಡ ಪುಸ್ತಕ ಪ್ರಾಧಿಕಾರ, ಕನ್ನಡ ಭವನ, ಜೆ.ಸಿ. ರಸ್ತೆ, ಬೆಂಗಳೂರು – 560 002 ಈ ವಿಳಾಸಕ್ಕೆ ಅರ್ಜಿ ಸಲ್ಲಿಸಬಹುದು.
  ಹೆಚ್ಚಿನ ಮಾಹಿತಿಗಾಗಿ ಆಡಳಿತಾಧಿಕಾರಿಗಳು, ಕನ್ನಡ ಪುಸ್ತಕ ಪ್ರಾಧಿಕಾರ, ಕನ್ನಡ ಭವನ, ಮೊದಲನೇ ಮಹಡಿ,  ಜೆ.ಸಿ. ರಸ್ತೆ, ಬೆಂಗಳೂರು – 560 002 ವೆಬ್‍ಸೈಟ್ www.kannadapustakapradhikara@gmail.co ದೂರವಾಣಿ ಸಂಖ್ಯೆ 080-22484516/22017704 ಇಲ್ಲಿ ಸಂಪರ್ಕಿಸಬಹುದಾಗಿದೆ.
  ಎಸ್‍ಎಂ:ಕೆಎನ್‍ಕೆ: ಜಿಪಿಆರ್
   ಸಂಖ್ಯೆ 498/598
   ಬರಹಗಾರರ ಚೊಚ್ಚಲ ಕೃತಿ – ಪ್ರೋತ್ಸಾಹ ಧನಕ್ಕಾಗಿ ಅರ್ಜಿ ಆಹ್ವಾನ
  ಬೆಂಗಳೂರು, ಜೂನ್ 8, (ಕರ್ನಾಟಕ ವಾರ್ತೆ)
   ಕನ್ನಡ ಪುಸ್ತಕ ಪ್ರಾಧಿಕಾರದ ವತಿಯಿಂದ 2017 ನೇ ಸಾಲಿನ ಯುವಬರಹಗಾರರ ಚೊಚ್ಚಲ ಕೃತಿಗಳನ್ನು ಪ್ರಕಟಿಸಲು, ಪ್ರೋತ್ಸಾಧನ ನೀಡುವ ಸಲುವಾಗಿ ಅರ್ಜಿಗಳನ್ನು ಆಹ್ವಾನಿಸಿದೆ.
  ಅರ್ಜಿದಾರರು ಕನಿಷ್ಟ 18 ರಿಂದ 35 ವರ್ಷ ವಯೋಮಿತಿಯವರಾಗಿರಬೇಕು.  ಸ್ವ-ವಿವರವುಳ್ಳ ಮನವಿಯೊಂದಿಗೆ ದೃಢೀಕೃತ ಎಸ್.ಎಸ್.ಎಲ್.ಸಿ. ಪ್ರಮಾಣ ಪತ್ರದ ಪ್ರತಿ ಅಥವಾ ಅಧಿಕೃತವಾದ, ದೃಢೀಕರಿಸಲ್ಪಟ್ಟ ಜನ್ಮ ದಾಖಲಾತಿ ಪ್ರಮಾಣ ಪತ್ರದ ಪ್ರತಗಿಯನ್ನು ಸಲ್ಲಿಸಬೇಕು. ಅಲ್ಲದೆ ಪ್ರಸ್ತುತ ಸಲ್ಲಸಲ್ಪಡುತ್ತಿರುವ ಕೃತಿಯು ತಮ್ಮ ಚೊಚ್ಚಲ ಕೃತಿಯಾಗಿದ್ದು, ಎಲ್ಲಯೂ ಪ್ರಕಟವಾಗಿಲ್ಲವೆಂದು ಸ್ವಯಂ ದೃಢೀಕರಣ ಪತ್ರ ನೀಡಬೇಕು.
  ಆಯ್ಕೆಗಾಗಿ ಸಲ್ಲಿಸುವ ಹಸ್ತಪ್ರತಿಯು ಡಿ.ಟಿ.ಪಿ ಮಾಡಿಸಿದಾಗಿ   1/8 ಡೆಮ್ಮಿ ಅಳತೆಯಲ್ಲಿ ಕನಿಷ್ಟ 60 ಪುಟಗಳಿರಬೇಕು.  ಅನುವಾದ ಪಠ್ಯಪುಸ್ತಕ ಹಾಗೂ  ಬೇರಾವುದೇ ಪದವಿಗೆ ಸಿದ್ಧಪಡಿಸಿದ ಪ್ರಬಂಧಗಳನ್ನು ಹೊರತುಪಡಿಸಿ,  ಕಥೆ, ಕಾದಂಬರಿ, ಕವನ, ನಾಟಕ, ವಿಮರ್ಶಾ ಲೇಖನ, ಪ್ರಬಂಧ ಮುಂತಾದ ಕನ್ನಡ ಸಾಹಿತ್ಯದ ಪ್ರಕಾರಗಳಿಗೆ ಸಂಬಂಧಿಸಿದಂತೆ ಹಸ್ತಪ್ರತಿ ಇರಬೇಕು.  ಕೃತಿಯು ಪಠ್ಯದಲ್ಲಿ ಯಾವುದೇ ಧರ್ಮ, ದೇವರು, ಜಾತಿ, ಕೋಮು, ವೃತ್ತಿ, ಸಮುದಾಯ, ಭಾಷೆ, ಆಚರಣೆ, ಪದ್ಧತಿ, ಇತ್ಯಾದಿ ಸಂಗತಿಗಳಿಗೆ ಸಂಬಂಧಿಸಿದಂತೆ ಹಾಗೂ ರಾಷ್ಟ್ರೀಯ ನಾಯಕರುಗಳ ಕುರಿತಂತೆ ನೇರವಾಗಿಯೇ ಆಗಲಿ ಅಥವಾ ಪರೋಕ್ಷವಾಗಿಯೇ ಆಗಲಿ ಮನನೋಯಿಸುವಂತಹ ವಿಷಯವಾಗಲಿ ಇರಬಾರದು.  ಅಲ್ಲದೆ, ರಾಷ್ಟ್ರೀಯ ಭಾವೈಕ್ಯತೆಗೆ ಧಕ್ಕೆ ತರುವಂತಹ ವಿಷಯ/ಸಂಗತಿಗಳು ಪ್ರಸ್ತಾಪವಾಗಿರಬಾರದು.  ಪ್ರಾಧಿಕಾರಕ್ಕೆ ಸಲ್ಲಿಸಲ್ಪಡುವ ಅರ್ಜಿಗಳನ್ನು/ಹಸ್ತಪ್ರತಿಗಳನ್ನು ಹಿಂದಿರುಗಿಸಲಾಗುವುದಿಲ್ಲ.  ಆದ ಕಾರಣ ಹಸ್ತಪ್ರತಿಯ/ಡಿ.ಟಿ.ಪಿ. ಪ್ರತಿಯ ಎರಡನೇ ಪ್ರತಿಯನ್ನು ಸಲ್ಲಿಸಲು ತಿಳಿಸಿದೆ.
  ಅರ್ಜಿಗಳನ್ನು ದಿನಾಂಕ: 30-06-2018 ರೊಳಗೆ ಆಡಳಿತಾಧಿಕಾರಿಗಳು, ಕನ್ನಡ ಪುಸ್ತಕ ಪ್ರಾಧಿಕಾರ, ಕನ್ನಡ ಭವನ, ಜೆ.ಸಿ. ರಸ್ತೆ, ಬೆಂಗಳೂರು – 560 002 ಅವರಿಗೆ ಕಳಹಿಸಿಕೊಡಲು ಕೋರಿದೆ.
  ಹೆಚ್ಚಿನ ಮಾಹಿತಿಗಾಗಿ ಆಡಳಿತಾಧಿಕಾರಿಗಳು, ಕನ್ನಡ ಪುಸ್ತಕ ಪ್ರಾಧಿಕಾರ, ಕನ್ನಡ ಭವನ, ಮೊದಲನೇ ಮಹಡಿ,  ಜೆ.ಸಿ. ರಸ್ತೆ, ಬೆಂಗಳೂರು – 560 002 ದೂರವಾಣಿ ಸಂಖ್ಯೆ 080-22484516/22017704 ಇಲ್ಲಿ ಸಂಪರ್ಕಿಸಬಹುದಾಗಿದೆ. ಅಥವಾ ಪ್ರಾಧಿಕಾರದ ವೆಬ್‍ಸೈಟ್www.kannadapustakapradhikara@gmail.com   ಅನ್ನು ಅವಲೋಕಿಸಬಹುದಾಗಿದೆ.
  ಎಸ್‍ಎಂ:ಕೆಎನ್‍ಕೆ: ಜಿಪಿಆರ್
   ಸಂಖ್ಯೆ 499/599
   “ಕನ್ನಡ ಪುಸ್ತಕ ಸೊಗಸು – 2017”
   ಬಹುಮಾನಕ್ಕಾಗಿ ಅರ್ಜಿ ಆಹ್ವಾನ
  ಬೆಂಗಳೂರು, ಜೂನ್ 8, (ಕರ್ನಾಟಕ ವಾರ್ತೆ)
   ಕನ್ನಡ ಪುಸ್ತಕ ಪ್ರಾಧಿಕಾರದ ವತಿಯಿಂದ ಜನವರಿ 2017 ರಿಂದ ಡಿಸೆಂಬರ್ 2017 ರ ಅವಧಿಯಲ್ಲಿ ಕನ್ನಡದಲ್ಲಿ ಪ್ರಕಟವಾದ ಕೃತಿಗಳಿಗೆ ಅವುಗಳ ಮುದ್ರಣ, ಮುಖಪುಟ ವಿನ್ಯಾಸ, ಗುಣಮಟ್ಟವನ್ನು ಪರಿಗಣಿಸಿ, ಕಲಾವಿದಕರು/ಲೇಖಕರು/ಪ್ರಕಾಶಕರಿಗೆ ‘ಕನ್ನಡ ಪುಸ್ತಕ ಸೊಗಸು -ಪ್ರಥಮ, ದ್ವಿತೀಯ, ತೃತೀಯ, ಮಕ್ಕಳ ಪುಸ್ತಕ ಮುಖಪುಟ ಚಿತ್ರ ವಿನ್ಯಾಸದ – ಪ್ರಥಮ, ಮುಖಪುಟ ಚಿತ್ರಕಲೆಯ- ದ್ವಿತೀಯ ಬಹುಮಾನಗಳನ್ನು ನೀಡಲು ಅರ್ಜಿಗಳನ್ನು ಆಹ್ವಾನಿಸಲಾಗಿದೆ.
  ಆಸಕ್ತ ಪ್ರಕಾಶಕರು/ಕಲಾವಿದರು/ಲೇಖಕರು ಸ್ವಯಂ ಅರ್ಜಿ ಸಲ್ಲಿಸಬಹುದಾಗಿದೆ.  ಪುಸ್ತಕದ ಹೆಸರು, ಲೇಖಕರ ಹೆಸರು,  ಪ್ರಕಟವಾದ ವರ್ಷ, ಪ್ರಕಾಶಕರ ಹೆಸರು, ಮುಖಪುರ ಚಿತ್ರ ರಚನೆಯ ಕಲಾವಿದರ ಹೆಸರು/ಚಿತ್ರ ಕಲಾವಿದರ ಪೂರ್ಣ ವಿಳಾಸ – ಈ ಎಲ್ಲಾ ವಿವರಗಳೊಂದಿಗೆ ಪುಸ್ತಕದ ಎರಡು ಪ್ರತಿಗಳನ್ನು ದಿನಾಂಕ: 30-06-2018 ರೊಳಗಾಗಿ ಆಡಳಿತಾಧಿಕಾರಿಗಳು, ಕನ್ನಡ ಪುಸ್ತಕ ಪ್ರಾಧಿಕಾರ, ಕನ್ನಡ ಭವನ, ಮೊದಲನೇ ಮಹಡಿ,  ಜೆ.ಸಿ. ರಸ್ತೆ, ಬೆಂಗಳೂರು – 560 002 ಈ ವಿಳಾಸಕ್ಕೆ ಕಳುಹಿಸಿಕೊಡಬಹುದಾಗಿದೆ.  ತಾವು ನೀಡಿದ ಪುಸ್ತಕಗಳನ್ನು ಯಾವುದೇ ಕಾರಣಕ್ಕೂ ಹಿಂದಿರುಗಿಸಲಾಗುವುದಿಲ್ಲ.
  ಹೆಚ್ಚಿನ ಮಾಹಿತಿಗಾಗಿ ಆಡಳಿತಾಧಿಕಾರಿಗಳು, ಕನ್ನಡ ಪುಸ್ತಕ ಪ್ರಾಧಿಕಾರ, ಕನ್ನಡ ಭವನ, ಮೊದಲನೇ ಮಹಡಿ,  ಜೆ.ಸಿ. ರಸ್ತೆ, ಬೆಂಗಳೂರು – 560 002. ವೆಬ್‍ಸೈಟ್ www.kannadapustakapradhikara@gmail.coದೂರವಾಣಿ ಸಂಖ್ಯೆ 080-22484516/22017704 ಇಲ್ಲಿ ಸಂಪರ್ಕಿಸಬಹುದಾಗಿದೆ.
  ಎಸ್‍ಎಂ:ಕೆಎನ್‍ಕೆ: ಜಿಪಿಆರ್
   ಸಂಖ್ಯೆ 500/600
   ಅಚ್ಚು ಮೆಚ್ಚಿನ ಪುಸ್ತಕ ಅಭಿಪ್ರಾಯ ಮಂಡನೆ ಸ್ಪರ್ಧೆ
  ಅಥವಾ ರಸಪ್ರಶ್ನೆ ಕಾರ್ಯಕ್ರಮ ಕುರಿತಂತೆ
  ಬೆಂಗಳೂರು, ಜೂನ್ 8, (ಕರ್ನಾಟಕ ವಾರ್ತೆ)
   ಕನ್ನಡ ಪುಸ್ತಕ ಪ್ರಾಧಿಕಾರವು ರಾಜ್ಯಾದ್ಯಂತ ಪ್ರೌಢಶಾಲೆಗಳಲ್ಲಿ “ಅಚ್ಚು ಮೆಚ್ಚಿನ ಪುಸ್ತಕ ಅಭಿಪ್ರಾಯ ಮಂಡನೆ ಸ್ಪರ್ಧೆ ಅಥವಾ ರಸಪ್ರಶ್ನೆ ಕಾರ್ಯಕ್ರಮ” ಏರ್ಪಡಿಸುವ ಕುರಿತು ಯೋಜನೆಯನ್ನು ಹಮ್ಮಿಕೊಂಡಿದೆ.
  ಈ ಯೋಜನೆಯಡಿ ಸರ್ಕಾರಿ, ಅನುದಾನಿತ ಹಾಗೂ ಖಾಸಗಿ ಪ್ರೌಢ ಶಾಲೆಗಳು ತಮ್ಮ ತಮ್ಮ ಶಾಲೆಗಳಲ್ಲಿ ಅಚ್ಚು ಮೆಚ್ಚಿನ ಪುಸ್ತಕ ಅಭಿಪ್ರಾಯ ಮಂಡನೆ ಸ್ಪರ್ಧೆ ಹಾಗೂ ರಸಪ್ರಶ್ನೆಯ ಒಂದು ಕಾರ್ಯಕ್ರಮ ಏರ್ಪಡಿಸಬಹುದಾಗಿದೆ.
  ಈ ಕಾರ್ಯಕ್ರಮವನ್ನು ನಡೆಸುವ ಸಲುವಾಗಿ ಪ್ರಾಧಿಕಾರವು ರೂ 5000/- ಗಳ ಗರಿಷ್ಟ ಮಿತಿಯೊಳಗೆ ವಾಸ್ತವಿಕ ವೆಚ್ಚವನ್ನು ಭರಿಸುವುದು.  ತಮ್ಮ ಶಾಲಾ ವಿವರಗಳೊಂದಿಗೆ ಕಾರ್ಯಕ್ರಮ ಹಮ್ಮಿಕೊಳ್ಳಬಹುದಾದ ದಿನಾಂಕ, ಆಹ್ವಾನಿಸುವ ಇಬ್ಬರು ತೀರ್ಪುಗಾರರ ಹೆಸರು ಇತ್ಯಾದಿ ವಿವರಗಳೊಂದಿಗೆ ಆಯಾ ಶಾಲಾ ಮುಖ್ಯಸ್ಥರು ಸ್ವಯಂ ಅರ್ಜಿ ಸಲ್ಲಿಸಲು ಕಡೆಯ ದಿನಾಂಕ               30-06-2018.  ಕಾರ್ಯಕ್ರಮ ಮುನ್ನ ಪ್ರಾಧಿಕಾರದಿಂದ ಪೂರ್ವಾನುಮೋದನೆ ಪಡೆಯುವುದು ಕಡ್ಡಾಯ.
  ಹೆಚ್ಚಿನ ಮಾಹಿತಿಗಾಗಿ ಆಡಳಿತಾಧಿಕಾರಿಗಳು, ಕನ್ನಡ ಪುಸ್ತಕ ಪ್ರಾಧಿಕಾರ, ಕನ್ನಡ ಭವನ,        ಮೊದಲನೇ ಮಹಡಿ, ಜೆ.ಸಿ. ರಸ್ತೆ, ಬೆಂಗಳೂರು – 560 002 ವೆಬ್‍ಸೈಟ್ www.kannadapustakapradhikara@gmail.co  ದೂರವಾಣಿ ಸಂಖ್ಯೆ 080-22484516/22017704 ಇಲ್ಲಿ ಸಂಪರ್ಕಿಸಬಹುದಾಗಿದೆ.
  ಎಸ್‍ಎಂ:ಕೆಎನ್‍ಕೆ: ಜಿಪಿಆರ್
   ಸಂಖ್ಯೆ 501/601
   ಜಾಣ ಜಾಣೆಯರ ಬಳಗ ’ ಕ್ಕೆ ಅರ್ಜಿ ಆಹ್ವಾನ
  ಬೆಂಗಳೂರು, ಜೂನ್ 8, (ಕರ್ನಾಟಕ ವಾರ್ತೆ)
  ಕನ್ನಡ ಪುಸ್ತಕ ಪ್ರಾಧಕಾರವು ವಿದ್ಯಾರ್ಥಿ ಯುವಜನರನ್ನು ಸಾಹಿತ್ಯಾಭಿರುಚಿಗೆ ಆಕರ್ಷಿಸಲು ಹಾಗೂ ಸಾಹಿತ್ಯದ ಕ್ರಿಯಾಶೀಲತೆಯನ್ನು ಬೆಳೆಸಲು ಪದವಿ ಕಾಲೇಜು ಹಾಗೂ ಸ್ನಾತಕೋತ್ತರ ಕೇಂದ್ರಗಳಲ್ಲಿ ‘ಜಾಣ ಜಾಣೆಯರ ಬಳಗ’ ವನ್ನು ರಚಿಸಲು ಅರ್ಜಿಗಳನ್ನು ಆಹ್ವಾನಿಸಿದೆ.
  ಕನಿಷ್ಟ 5 ರಿಂದ 15 ಮಂದಿ ವಿದ್ಯಾರ್ಥಿಗಳನ್ನೊಳಗೊಂಡಂತೆ ಕಾರ್ಯಕಾರಿ ಸಮಿತಿಯೊಂದನ್ನು ರಚಿಸಿಕೊಂಡು, ಆಯಾ ಕಾಲೇಜುಗಳ ಪ್ರಾಂಶುಪಾಲರು ಹಾಗೂ ಕನ್ನಡ ವಿಭಾಗಗಳ ಮುಖ್ಯಸ್ಥರ ಅನುಮೋದನೆಯೊಂದಿಗೆ ಅರ್ಜಿ ಸಲ್ಲಿಸಬಹುದಾಗಿದೆ.
  ಕಾಲೇಜಿನಲ್ಲಿ ಕನ್ನಡ ಸಾಹಿತ್ಯಿಕ  ವಾತಾವರಣವನ್ನು ಕ್ರಿಯಾಶೀಲವಾಗಿಸುವ ನಿಟ್ಟಿನಲ್ಲಿ ವರ್ಷದಲ್ಲಿ 4 ಕಾರ್ಯಕ್ರಮಗಳಂತೆ ಕನ್ನಡ ಸಾಹಿತ್ಯ ಚಟುವಟಿಕೆಯನ್ನು ಈ ಬಳಗವು ಹಮ್ಮಿಕೊಳ್ಳುತ್ತದೆ.  ಇದಕ್ಕಾಗಿ ಪ್ರಾಧಿಕಾರದಿಂದ ಕಾರ್ಯಕ್ರಮ ಒಂದಕ್ಕೆ ರೂ 5,000/- ಗಳ ಗರಿಷ್ಟ ಮಿತಿಯೊಳಗೆ ವಾಸ್ತವಿಕ ವೆಚ್ಚವನ್ನು ಭರಿಸಲಾಗುವುದು.   ಇದಲ್ಲದೆ ಪ್ರಾಧಿಕಾರವು ಹಮ್ಮಿಕೊಳ್ಳುವ ಎಲ್ಲಾ ಯೋಜನೆ ಹಾಗೂ ಕಾರ್ಯಕ್ರಮಗಳಲ್ಲಿ ಈ ‘ಜಾಣ ಜಾಣೆಯರ ಬಳಗ’ ವನ್ನು ತೊಡಗಿಸಿಕೊಳ್ಳಲಾಗುವುದು.  ಅರ್ಜಿ ಸಲ್ಲಿಸಲು ಕಡೆಯ ದಿನಾಂಕ : 30-06-2018.
  ನಿಗದಿತ ಅರ್ಜಿ ನಮೂನೆಗಾಗಿ ಹಾಗೂ ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಸಹಾಯಕ ನಿರ್ದೇಶಕರು, ಕನ್ನಡ ಮತ್ತು ಸಂಸ್ಕøತಿ  ಇಲಾಖೆಯ ಕಚೇರಿಯನ್ನು ಅಥವಾ ಕನ್ನಡ ಪುಸ್ತಕ ಪ್ರಾಧಿಕಾರ, ಕನ್ನಡ ಭವನ, ಮೊದಲನೇ ಮಹಡಿ,  ಜೆ.ಸಿ. ರಸ್ತೆ, ಬೆಂಗಳೂರು – 560 002 ವೆಬ್‍ಸೈಟ್ www.kannadapustakapradhikara@gmail.com  ದೂರವಾಣಿ ಸಂಖ್ಯೆ 080-22484516/22017704 ಅವರಿಗೆ ಕಳುಹಿಸಿಕೊಡಲು ಕೋರಿದೆ.
  ಎಸ್‍ಎಂ:ಕೆಎನ್‍ಕೆ: ಜಿಪಿಆರ್
  • Comments Off on ದಲಿತ ಸಾಹಿತಿಗಳ ಕೃತಿ ಪ್ರಕಟಣೆಗೆ ಪ್ರೋತ್ಸಾಹ ಧನ
  • 1 Star2 Stars3 Stars4 Stars5 Stars (No Ratings Yet)
   Loading...Loading...
  • 0 views

  Leave a Reply

  Comments are closed on this post.